Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:117 - ಕನ್ನಡ ಸತ್ಯವೇದವು C.L. Bible (BSI)

117 ನನಗಾಧಾರವಾಗಿರು ಸುರಕ್ಷಿತನಾಗಿರುವೆ I ನಿನ್ನಾ ನಿಬಂಧನೆಗಳಿಗೆ ಸದಾ ಗಮನ ಕೊಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

117 ನೀನು ನನಗೆ ಆಧಾರವಾಗಿರು, ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

117 ನೀನು ನನಗೆ ಆಧಾರವಾಗಿರು; ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

117 ನನಗೆ ಸಹಾಯಮಾಡು, ಆಗ ನಾನು ರಕ್ಷಿಸಲ್ಪಡುವೆನು. ನಾನು ನಿನ್ನ ಕಟ್ಟಳೆಗಳನ್ನು ಯಾವಾಗಲೂ ಕಲಿಯುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

117 ನನ್ನನ್ನು ಎತ್ತಿ ಹಿಡಿಯಿರಿ, ಆಗ ನಾನು ಬಿಡುಗಡೆಯಾಗುವೆನು; ನಿಮ್ಮ ತೀರ್ಪುಗಳಿಗೆ ಯಾವಾಗಲೂ ಗಮನಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:117
13 ತಿಳಿವುಗಳ ಹೋಲಿಕೆ  

ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಹುಟ್ಟಿನಿಂದಲೆ ನಾ ನಿನಗಂಟಿಕೊಂಡಿರುವೆನಯ್ಯಾ I ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ I ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ II


ಅಲ್ಲೂ ನನ್ನ ನಡೆಸುವುದು ನಿನ್ನ ಕೈ I ನನ್ನ ಹಿಡಿದಿರುವುದು ನಿನ್ನ ಬಲಗೈ II


ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II


ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.


ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.


ನಾ ಕೈಯೊಡ್ಡಿ ಕೇಳುವುದು ನಿನ್ನ ಆಜ್ಞೆಗಳನೆ I ನನಗೆ ಪ್ರಿಯ, ಧ್ಯಾನಾರ್ಹ, ನಿನ್ನ ನಿಬಂಧನೆ II


ಆದರೂ ನಾನಿರುವೆ ನಿನ್ನ ಸನ್ನಿಧಿಯಲಿ I ನೀ ಹಿಡಿದಿರುವೆ ನನ್ನ ಬಲಗೈಯನು ಭದ್ರವಾಗಿ II


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಆತನ ವಿಧಿನಿಯಮಗಳನು ಅಲಕ್ಷ್ಯಮಾಡದೆ I ಆತನಾಜ್ಞೆಗಳನ್ನಿಟ್ಟೆ ಸದಾ ನನ್ನ ಕಣ್ಗಳ ಮುಂದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು