Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:124 - ಕನ್ನಡ ಸತ್ಯವೇದವು C.L. Bible (BSI)

124 ಕೃಪೆಯಿಂದ ನಡೆಸು ನಿನ್ನ ದಾಸನನು I ಕಲಿಸೆನಗೆ ನಿನ್ನ ನಿಬಂಧನೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

124 ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

124 ನಿನ್ನ ಸೇವಕನನ್ನು ಕೃಪೆಯಿಂದ ನಡಿಸು; ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

124 ನಿನ್ನ ಸೇವಕನಾದ ನನಗೆ ನಿನ್ನ ಶಾಶ್ವತ ಪ್ರೀತಿಯನ್ನು ತೋರಿಸು. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

124 ನಿಮ್ಮ ಪ್ರೀತಿಗೆ ಅನುಸಾರವಾಗಿ ನಿಮ್ಮ ಸೇವಕನೊಂದಿಗೆ ವ್ಯವಹರಿಸಿ, ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:124
19 ತಿಳಿವುಗಳ ಹೋಲಿಕೆ  

ಸ್ತುತಿ ಸಲ್ಲಲಿ ಪ್ರಭು ನಿನಗೆ I ನಿನ್ನ ಆಜ್ಞೆಗಳನು ಕಲಿಸು ಎನಗೆ II


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II


ನಿನ್ನ ನಾಮಪ್ರಿಯರಿಗೆ ಮಾಡುವಂತೆ I ನನಗಭಿಮುಖನಾಗಿ ತೋರು ನೀ ಮಮತೆ II


ನನ್ನ ಗತನಡತೆಯನು ಕೇಳಿ ಸದುತ್ತರಿಸಿದೆಯಯ್ಯಾ I ನಿನ್ನ ನಿಬಂಧನೆಗಳನೀಗ ನನಗೆ ಉಪದೇಶಿಸಯ್ಯಾ II


ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ I ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ II


ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ದೊರಕಲಿ ಪ್ರಭು ನನಗೆ ನಿನ್ನ ಕರುಣೆ I ನೀನು ವಾಗ್ದಾನಮಾಡಿದಾ ರಕ್ಷಣೆ II


ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II


ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.


ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II


ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು I ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು