Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:125 - ಕನ್ನಡ ಸತ್ಯವೇದವು C.L. Bible (BSI)

125 ನಿನ್ನ ದಾಸ ನಾನು, ದಯಪಾಲಿಸು ಎನಗೆ I ನಿನ್ನ ಕಟ್ಟಳೆಗಳನು ಅರಿವ ತಿಳುವಳಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

125 ನಾನು ನಿನ್ನ ಸೇವಕನು, ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

125 ನಾನು ನಿನ್ನ ಸೇವಕನು; ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

125 ನಾನು ನಿನ್ನ ಸೇವಕ, ನಿನ್ನ ಒಡಂಬಡಿಕೆಯನ್ನು ಗ್ರಹಿಸಿಕೊಳ್ಳಲು ನನಗೆ ಬೇಕಾದ ವಿವೇಕವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

125 ನಾನು ನಿಮ್ಮ ಸೇವಕನು, ನಿಮ್ಮ ಶಾಸನಗಳನ್ನು ನಾನು ಅರ್ಥಮಾಡಿಕೊಳ್ಳುವಂತೆ ನನಗೆ ವಿವೇಚನೆಯನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:125
16 ತಿಳಿವುಗಳ ಹೋಲಿಕೆ  

ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ನಾನು ಹೇಳುತ್ತಿರುವುದನ್ನು ಆಲೋಚಿಸಿ ನೋಡು; ಇದೆಲ್ಲವನ್ನು ಚೆನ್ನಾಗಿ ಗ್ರಹಿಸಲು ಪ್ರಭು ನಿನಗೆ ನೆರವಾಗುವರು.


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ಸರ್ವೇಶ್ವರನಲ್ಲಿನ ಭಯಭಕ್ತಿ ಜ್ಞಾನಕ್ಕೆ ಮೂಲ; ಪರಮಪಾವನನನ್ನು ಅರಿಯುವುದು ವಿವೇಕ.


ಉದ್ಧರಿಸೆನ್ನನು, ನಾನು ನಿನ್ನವನು I ನಿನ್ನ ನಿಯಮಗಳಲೇ ಆಸಕ್ತನು II


ಸುಜ್ಞಾನ ವಿವೇಕಗಳನು ಕಲಿಸೆನಗೆ I ನಿನ್ನಾಜ್ಞೆಗಳಲಿ ನನಗಿದೆ ನಂಬಿಕೆ II


ಮಿಥ್ಯಮಾರ್ಗವನು ನನಗೆ ದೂರಮಾಡಯ್ಯಾ I ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ II


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಕಟಾಕ್ಷವಿಟ್ಟು ಕರುಣಿಸೆನ್ನನು I ನೀಡು ನಿನ್ನ ದಾಸನಿಗೆ ಬಲವನು I ರಕ್ಷಿಸು ನಿನ್ನ ದಾಸಿಯ ಮಗನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು