Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:130 - ಕನ್ನಡ ಸತ್ಯವೇದವು C.L. Bible (BSI)

130 ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

130 ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

130 ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

130 ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

130 ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:130
17 ತಿಳಿವುಗಳ ಹೋಲಿಕೆ  

ನಿನ್ನ ವಾಕ್ಯ ನನಗೆ ದಾರಿದೀಪ I ನನ್ನ ಕಾಲಿನ ನಡೆಗೆ ಕೈದೀಪ II


ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.


ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು