Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:133 - ಕನ್ನಡ ಸತ್ಯವೇದವು C.L. Bible (BSI)

133 ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು I ಕೆಡುಕೊಂದೂ ಅಧೀನಪಡಿಸದಿರಲಿ ನನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

133 ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

133 ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು; ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

133 ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಮಾರ್ಗದರ್ಶನ ನೀಡು. ಯಾವ ಕೇಡೂ ನನಗೆ ಸಂಭವಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

133 ನನ್ನ ಹೆಜ್ಜೆಗಳನ್ನು ನಿಮ್ಮ ವಾಕ್ಯದ ಪ್ರಕಾರ ಮುನ್ನಡೆಸಿರಿ; ಯಾವ ಪಾಪವಾದರೂ ನನ್ನನ್ನು ಆಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:133
9 ತಿಳಿವುಗಳ ಹೋಲಿಕೆ  

ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II


ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II


ನಿನ್ನ ನುಡಿಗನುಸಾರ ಉದ್ಧರಿಸು, ನಾ ಬದುಕುವೆ I ನಿರಾಶೆಗೊಳಿಸಬೇಡ ನಾ ನಿರೀಕ್ಷಿಸುತ್ತಿರುವೆ II


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು