Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:140 - ಕನ್ನಡ ಸತ್ಯವೇದವು C.L. Bible (BSI)

140 ನಿನ್ನ ನುಡಿಯೊಂದೊಂದೂ ಪರಮ ಪರಿಶೋಧಿತ I ಅದರ ಮೇಲಿದೆ ನಿನ್ನ ದಾಸನಿಗೆ ಬಹುಮೋದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

140 ನಿನ್ನ ನುಡಿಯು ಪರಿಶುದ್ಧವಾದದ್ದು, ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

140 ನಿನ್ನ ನುಡಿಯು ಪರಿಶುದ್ಧವಾದದ್ದು; ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

140 ನಿನ್ನ ವಾಗ್ದಾನಗಳು ಪರೀಕ್ಷಿಸಲ್ಪಟ್ಟಿವೆ. ಅವು ನನಗೆ ಪ್ರಿಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

140 ನಿಮ್ಮ ವಾಗ್ದಾನಗಳು ಬಹು ಪರಿಶೋಧಿತವಾಗಿವೆ, ಆದ್ದರಿಂದ ನಿಮ್ಮ ಸೇವಕನು ಅವುಗಳನ್ನು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:140
12 ತಿಳಿವುಗಳ ಹೋಲಿಕೆ  

ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ;


ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ದೇವರ ಮಾರ್ಗ ದೋಷರಹಿತ I ಸರ್ವೇಶ್ವರನ ವಚನ ಪರಮಪುನೀತ I ಆಶ್ರಿತರೆಲ್ಲರಿಗಾತ ರಕ್ಷಣಾಕವಚ II


ನಾನು ಮಾಡುವುದನ್ನು ಮನಸ್ಸು ಒಪ್ಪದಿದ್ದರೆ, ಧರ್ಮಶಾಸ್ತ್ರ ಸರಿಯಾದುದೆಂದು ನಾನು ಒಪ್ಪಿಕೊಂಡ ಹಾಗಾಯಿತು.


ಅಲೆದಾಡುತಿಹರು ದುರುಳ ದ್ರೋಹಿಗಳು ಎಲ್ಲೆಡೆ I ದುಷ್ಟರಿಗಿದೆ ಮಾನವರ ನಡುವೆ ಪ್ರತಿಷ್ಟೆ II ನಮ್ಮನಿವರ ಕೈಯಿಂದ ತಪ್ಪಿಸಿ ಕಾಪಾಡು I ಹೇ ಪ್ರಭು, ನಮ್ಮನು ಸದಾ ಸುರಕ್ಷಿತವಾಗಿಡು II


ನಿನ್ನ ಆಜ್ಞೆಗಳಲ್ಲಿದೆ ನನಗಾನಂದ I ಅವುಗಳ ಮೇಲೆಯೆ ನನಗಭಿಮೋದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು