Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:141 - ಕನ್ನಡ ಸತ್ಯವೇದವು C.L. Bible (BSI)

141 ನಾನಲ್ಪನು, ತಿರಸ್ಕಾರ ಹೊಂದಿದವನು I ಆದರೂ ಮರೆತಿಲ್ಲ ನಿನ್ನ ನೇಮಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

141 ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

141 ನಾನು ಅಲ್ಪನೂ ತಿರಸ್ಕಾರಹೊಂದಿದವನೂ ಆಗಿದ್ದೇನೆ; ಆದರೂ ನಿನ್ನ ನೇಮಗಳನ್ನು ಮರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

141 ನಾನು ಅಲ್ಪನೂ ತಿರಸ್ಕೃತನೂ ಆಗಿದ್ದೇನೆ. ಆದರೂ ನಾನು ನಿನ್ನ ನಿಯಮಗಳನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

141 ನಾನು ಅಲ್ಪನೂ, ತಿರಸ್ಕಾರ ಹೊಂದಿದವನು ಆಗಿದ್ದರೂ, ನಿಮ್ಮ ಸೂತ್ರಗಳನ್ನು ನಾನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:141
14 ತಿಳಿವುಗಳ ಹೋಲಿಕೆ  

ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು.


ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು.


ಅನ್ಯಾಯದಿಂದ ಗಳಿಸಿದ ಅಪಾರ ನಿಧಿಗಿಂತಲು ನ್ಯಾಯದಿಂದ ಕೂಡಿಸಿದ ಅಲ್ಪ ಧನ ಲೇಸು.


ನೆಮ್ಮದಿಯಿಲ್ಲದ ಸಿರಿಸಂಪತ್ತಿಗಿಂತಲು, ಸರ್ವೇಶ್ವರನ ಭಯಭಕ್ತಿಯಿಂದ ಕೂಡಿದ ಕಿಂಚಿತ್ತೇ ಮೇಲು.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಕೈಯಲಿ ಜೀವ ಹಿಡಿದು ಕಳೆಯುತಿರುವೆ ಕಾಲವೆಲ್ಲ I ಆದರೂ ಪ್ರಭು, ನಾ ಧರ್ಮಶಾಸ್ತ್ರವನು ಮರೆತಿಲ್ಲ II


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು