Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:147 - ಕನ್ನಡ ಸತ್ಯವೇದವು C.L. Bible (BSI)

147 ಅರುಣೋದಯದಲೆದ್ದು ಮೊರೆಯಿಟ್ಟೆನು I ನಿನ್ನ ವಾಕ್ಯದಲೆ ನಂಬಿಕೆಯಿಟ್ಟೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

147 ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು, ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

147 ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು; ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

147 ಸೂರ್ಯೋದಯದಲ್ಲಿ ಎದ್ದು ನಿನಗೆ ಮೊರೆಯಿಟ್ಟೆನು. ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

147 ನಾನು ಸೂರ್ಯೋದಯಕ್ಕೆ ಮೊದಲು ಎದ್ದು ನಿಮಗೆ ಮೊರೆ ಇಟ್ಟಿದ್ದೇನೆ; ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:147
15 ತಿಳಿವುಗಳ ಹೋಲಿಕೆ  

ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ I ಉದಯದಲೆ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ II


ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II


ನಿನ್ನಾ ವಾಕ್ಯದಲಿ ನಾನಿತ್ತ ನಿರೀಕ್ಷೆಯಿಂದ I ಭಯಭಕ್ತಿಯುಳ್ಳವನು ನೋಡಿ ಪಡೆದನು ಆನಂದ II


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II


ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಚೇತನಗೊಳ್ಳು, ಮನವೇ ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ನಾನೆಬ್ಬಿಸುವೆನು ಬೆಳಗಿನ ಜಾವವನು II


ಚೇತನಗೊಳ್ಳು ಮನವೇ, ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ಎಬ್ಬಿಸಿ ರವಿಯನು ಪ್ರಾತಃಕಾಲದೊಳು II


ನೀನಾತನನು ಸ್ವಾಗತಿಸಿದೆ ಶುಭಾಶಯದೊಂದಿಗೆ I ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ II


ನನ್ನ ಯೋಚನೆ ನಿನ್ನ ಬಳಿಸೇರಲಿ I ನನ್ನ ಕೂಗು ನಿನ್ನ ಕಿವಿಗೆ ಬೀಳಲಿ II


ತೆಗೆಯಬೇಡ ನನ್ನ ಬಾಯಿಂದ ಸತ್ಯವನು I ನಂಬಿಕೊಂಡಿರುವೆ ನಿನ್ನ ನ್ಯಾಯವಿಧಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು