Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:149 - ಕನ್ನಡ ಸತ್ಯವೇದವು C.L. Bible (BSI)

149 ಪ್ರೀತಿಯಿಂದ ಹೇ ಪ್ರಭೂ, ಕೇಳೆನ್ನ ಮೊರೆಯನು I ನಿನ್ನ ವಿಧಿಗನುಸಾರ ಚೇತನಗೊಳಿಸೆನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

149 ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು, ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

149 ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು; ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

149 ಯೆಹೋವನೇ, ನಿನ್ನ ಪೂರ್ಣ ಪ್ರೀತಿಯಿಂದ ನನಗೆ ಕಿವಿಗೊಡು. ನಿನ್ನ ನಿಯಮಗಳಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

149 ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನ ಮೊರೆಯನ್ನು ಕೇಳಿರಿ; ನಿಮ್ಮ ನಿಯಮಗಳ ಅನುಸಾರವಾಗಿ ನನ್ನ ಬದುಕನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:149
12 ತಿಳಿವುಗಳ ಹೋಲಿಕೆ  

ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II


ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ I ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ II


ನನ್ನ ಮನವಿಯನಾಲಿಸು, ದಯಪಾಲಿಸು ಸದುತ್ತರವನು I ಚಿಂತಾಕ್ರಾಂತನಾದ ನಾನು ಪ್ರಲಾಪಿಸುತ್ತಿರುವೆನು II


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ನಿನ್ನ ಕೃಪಾಕಾರ್ಯಗಳು, ಹೇ ಪ್ರಭೂ, ಅಪಾರ I ಚೇತನಗೊಳಿಸೆನ್ನನು, ನಿನ್ನ ವಿಧಿಗಳಿಗನುಸಾರ II


ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II


ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II


ನನ್ನ ಪರ ವಾದಿಸಿ, ಬಿಡುಗಡೆ ಮಾಡು ಎನ್ನನು I ನಿನ್ನ ನುಡಿಗನುಸಾರ ಚೇತನಗೊಳಿಸು ನನ್ನನು II


ಕಿವಿಗೊಡು ದೇವಾ, ನನ್ನಾತ್ಮದ ಮೊರೆಗೆ I ಕಾಪಾಡು, ಶತ್ರುಗಳ ಭಯವಿದೆ ನನಗೆ II


ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು I ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು