Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:15 - ಕನ್ನಡ ಸತ್ಯವೇದವು C.L. Bible (BSI)

15 ನನಗಿದೆ ನಿನ್ನ ನಿಯಮಗಳ ಧ್ಯಾನ I ನಿನ್ನ ಮಾರ್ಗಗಳಲ್ಲಿ ಗಾಢ ಗಮನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ, ನಿನ್ನ ದಾರಿಯನ್ನು ಲಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನ್ನ ನೇಮಗಳನ್ನು ಧ್ಯಾನಿಸುತ್ತಾ ನಿನ್ನ ದಾರಿಯನ್ನು ಲಕ್ಷೀಕರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನಿನ್ನ ನಿಯಮಗಳನ್ನು ಚರ್ಚಿಸುವೆನು ನಿನ್ನ ಜೀವಮಾರ್ಗವನ್ನು ಅನುಸರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಸೂತ್ರಗಳನ್ನು ಧ್ಯಾನಮಾಡಿ, ನಿಮ್ಮ ಮಾರ್ಗಗಳನ್ನು ದೃಷ್ಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:15
12 ತಿಳಿವುಗಳ ಹೋಲಿಕೆ  

ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ನಿನ್ನ ನುಡಿಯನು ಧ್ಯಾನಿಸಬೇಕೆಂದೇ I ಎಚ್ಚರಗೊಳ್ಳುವೆ ಇರುಳಿನ ಜಾವಕೆ ಮುಂದೆ II


ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ I ನಾನದರಲೇ ದಿನವೆಲ್ಲಾ ಧ್ಯಾನಮಯ II


ನನಗೆ ಕೇಡು ಬಗೆದ ಗರ್ವಿಗಳಿಗಾಗಲಿ ಮಾನಭಂಗ I ನಾನಾದರೋ ಗೈವೆ ನಿನ್ನ ನೇಮಗಳ ಧ್ಯಾನಯೋಗ II


ನಾ ಕೈಯೊಡ್ಡಿ ಕೇಳುವುದು ನಿನ್ನ ಆಜ್ಞೆಗಳನೆ I ನನಗೆ ಪ್ರಿಯ, ಧ್ಯಾನಾರ್ಹ, ನಿನ್ನ ನಿಬಂಧನೆ II


ಬಾಯ್ದೆರೆದು ಹಾತೊರೆಯುತಿರುವೆ I ನಿನ್ನ ಆಜ್ಞೆಗಳನು ಅರಸುತಿರುವೆ II


ನನಗಾಧಾರವಾಗಿರು ಸುರಕ್ಷಿತನಾಗಿರುವೆ I ನಿನ್ನಾ ನಿಬಂಧನೆಗಳಿಗೆ ಸದಾ ಗಮನ ಕೊಡುವೆ II


ಒಳಸಂಚು ಮಾಡುತ್ತಿದ್ದರು ಒಡೆಯರು ಎನಗೆದುರಾಗಿ I ದಾಸ ನಾನಿರುವೆ ನಿನ್ನ ಆಜ್ಞೆಗಳಲೆ ಮಗ್ನನಾಗಿ II


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ಸಂಜೆ ವೇಳೆಯಲ್ಲಿ ಅವನು ವಿಶ್ರಾಂತಿಗಾಗಿ ತಿರುಗಾಡಲು ಹೋಗಿದ್ದನು. ಕಣ್ಣೆತ್ತಿ ನೋಡಿದಾಗ ಒಂಟೆಗಳು ಬರುತ್ತಿರುವುದು ಅವನಿಗೆ ಕಾಣಿಸಿತು.


ನಿನ್ನ ಕಟ್ಟಳೆಗಳ ಧ್ಯಾನಿ ನಾನಾದುದರಿಂದ I ನಾನಧಿಕ ಜ್ಞಾನಿ ನನ್ನ ಬೋಧಕರೆಲ್ಲರಿಗಿಂತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು