Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:157 - ಕನ್ನಡ ಸತ್ಯವೇದವು C.L. Bible (BSI)

157 ದ್ವೇಷಿಸಿದರು, ಹಿಂಸಿಸಿದರು, ಹಲವರು ನನ್ನನು I ಆದರೂ ಬಿಟ್ಟಿಲ್ಲ ನಾನು ನಿನ್ನ ಕಟ್ಟಳೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

157 ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

157 ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟುನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

157 ಅನೇಕ ವೈರಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನಾನಾದರೋ ನಿನ್ನ ಕಟ್ಟಳೆಗಳನ್ನು ಅನುಸರಿಸುತ್ತಲೇ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

157 ನನ್ನನ್ನು ಹಿಂಸಿಸುವ ನನ್ನ ವೈರಿಗಳು ಅನೇಕರಾಗಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಬಿಟ್ಟುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:157
18 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಹಾಸ್ಯ ಅಪಹಾಸ್ಯ ಮಾಡಿದರು ಗರ್ವಿಷ್ಠರೆನ್ನನು I ಆದರೂ ನಾ ಬಿಡಲಿಲ್ಲ ನಿನ್ನ ಧರ್ಮಶಾಸ್ತ್ರವನು II


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


ಆತನ ಹೆಜ್ಜೆಯ ಜಾಡಿನಲ್ಲೆ ನಾನು ಕಾಲಿಟ್ಟೆ ಓರೆಯಾಗದೆ ಆತನ ದಾರಿಯನ್ನೇ ಹಿಡಿದೆ.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ಒಡ್ಡಿಹರು ಎನಗೆ ಆ ದುರುಳ ಜನರು ಬಲೆಯನು I ಆದರೂ ಮೀರಿಲ್ಲ ನಾನು ನಿನ್ನ ನಿಯಮಗಳನು II


ವಿರೋಧಿಗಳು ದಿನವಿಡೀ ಬೆನ್ನಟ್ಟಿ ಬರುತಿಹರು I ಸೊಕ್ಕಿನಿಂದ ನನಗೆದುರಾಗಿ ನಿಂತಿರುವರು ಹಲವರು II


ನಿನ್ನ ಮರೆಯಲಿಲ್ಲ, ನಿನ್ನ ಒಪ್ಪಂದವನು ಮೀರಲಿಲ್ಲ I ಆದರೂ ಒದಗಿವೆಯಲ್ಲ ನಮಗೀ ಅನಾಹುತಗಳೆಲ್ಲ II


ಶತ್ರುಗಳಿಹರು ನೋಡು ಸಹಸ್ರಾರು I ಕ್ರೋಧದಿಂದೆನ್ನ ಹಗೆ ಮಾಡುತಿಹರು II


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ಸುತ್ತಿಕೊಂಡಿವೆಯೆನ್ನನು ಬಲವಂತ ಹೋರಿಗಳು I ಮುತ್ತಿಕೊಂಡಿವೆ ಬಾಷಾನಿನ ಹಲವು ಗೂಳಿಗಳು II


ನಿನ್ನಾಶ್ರಯವನರಸಿ ಹೇ ಸ್ವಾಮಿ ದೇವಾ, ನಾ ಬಂದಿಹೆನು I ಬೆನ್ನಟ್ಟಿ ಬರುವವರ ಕೈಯಿಂದ ತಪ್ಪಿಸಿ, ಕಾಪಾಡೆನ್ನನು II


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು