Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:161 - ಕನ್ನಡ ಸತ್ಯವೇದವು C.L. Bible (BSI)

161 ಪೀಡಿಸುತಿಹರು ನಿಷ್ಕಾರಣವಾಗಿ ರಾಜರುಗಳು I ನಿನ್ನ ವಾಕ್ಯದ ಭೀತಿ ಇಹುದು ನನ್ನ ಹೃದಯದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

161 ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

161 ಪ್ರಭುಗಳು ನಿಷ್ಕಾರಣವಾಗಿ ನನ್ನನ್ನು ಹಿಂಸಿಸುತ್ತಾರೆ; ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

161 ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

161 ಅಧಿಕಾರಿಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ಆದರೆ ನನ್ನ ಹೃದಯವು ನಿಮ್ಮ ವಾಕ್ಯಗಳಿಗೆ ನಡುಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:161
14 ತಿಳಿವುಗಳ ಹೋಲಿಕೆ  

ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ದ್ವೇಷಿಸಿದರು, ಹಿಂಸಿಸಿದರು, ಹಲವರು ನನ್ನನು I ಆದರೂ ಬಿಟ್ಟಿಲ್ಲ ನಾನು ನಿನ್ನ ಕಟ್ಟಳೆಗಳನು II


ನನ್ನ ಒಡೆಯ, ತಮ್ಮ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆ? ಯಾವ ಪಾಪಕ್ಕೆ ಕೈಹಾಕಿದೆ?


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಒಳಸಂಚು ಮಾಡುತ್ತಿದ್ದರು ಒಡೆಯರು ಎನಗೆದುರಾಗಿ I ದಾಸ ನಾನಿರುವೆ ನಿನ್ನ ಆಜ್ಞೆಗಳಲೆ ಮಗ್ನನಾಗಿ II


ಕೋಪಗೊಂಡರೂ ದೂರವಿರು ಪಾಪದಿಂದ I ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II


ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.


ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ನನ್ನ ಬಳಿ ಹುಚ್ಚರು ಕಡಿಮೆಯೆಂದು ನೆನೆಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ತಂದಿರೋ? ಇಂಥವನು ನನ್ನ ಮನೆಗೆ ಬರಬೇಕಿತ್ತೋ?’ ಎಂದನು.


ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು