Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:165 - ಕನ್ನಡ ಸತ್ಯವೇದವು C.L. Bible (BSI)

165 ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ I ವಿಘ್ನಕರವಾದುದೇನೂ ಇರದು ಅಂಥವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

165 ನಿಮ್ಮ ನಿಯಮ ಪ್ರಿಯರಿಗೆ ಅಪಾರ ಸಮಾಧಾನವಿರುತ್ತದೆ, ಅಂಥವರಿಗೆ ಆತಂಕವೇನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:165
18 ತಿಳಿವುಗಳ ಹೋಲಿಕೆ  

ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.


ಹೀಗೆ ನೀನು ಎಡವದೆ ನಡೆಯುವೆ, ನಿನ್ನ ಮಾರ್ಗದೊಳು ಭಯವಿಲ್ಲದೆ ಸಾಗುವೆ.


ಆಕೆಯ ದಾರಿ ಸುಖಕರ, ಆಕೆಯ ಮಾರ್ಗ ಕ್ಷೇಮಕರ.


ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು.


ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.


ಆದುದರಿಂದಲೇ ಸರ್ವೇಶ್ವರ ನಿಮಗೆ ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.


ಈ ನಿನ್ನ ನಿಯಮಗಳ ಪಾಲನೆ I ನನ್ನ ಪಾಲಿಗದು ಸಂಭಾವನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು