Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:17 - ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ಸೇವಕನಾದ ನನ್ನ ಮೇಲೆ ದಯವಿಡು, ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ಸೇವಕನಾದ ನನ್ನ ಮೇಲೆ ದಯವಿಡು; ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಸೇವಕನಾದ ನನಗೆ ದಯೆತೋರು. ಆಗ ನಾನು ಜೀವದಿಂದಿದ್ದು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಜೀವದಿಂದಿದ್ದು ನಿಮ್ಮ ವಾಕ್ಯವನ್ನು ಕೈಗೊಳ್ಳುವಂತೆ ನಿಮ್ಮ ಸೇವಕನ ಮೇಲೆ ದಯೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:17
19 ತಿಳಿವುಗಳ ಹೋಲಿಕೆ  

ಪ್ರಭು ಮಾಡಿದ ಮಹೋಪಕಾರಗಳಿಗಾಗಿ I ಹಾಡುವೆ ಗೀತವನು ಮನಃಪೂರ್ವಕವಾಗಿ II


ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II


ಕೃಪೆಯಿಂದ ನಡೆಸು ನಿನ್ನ ದಾಸನನು I ಕಲಿಸೆನಗೆ ನಿನ್ನ ನಿಬಂಧನೆಗಳನು II


ಹೇ ಪ್ರಭೂ, ನಿನ್ನ ವಾಗ್ದಾನದ ಪ್ರಕಾರ I ಮಾಡಿದೆ ನಿನ್ನ ದಾಸನಿಗೆ ಮಹೋಪಕಾರ II


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ನಿನ್ನ ನಾಮಪ್ರಿಯರಿಗೆ ಮಾಡುವಂತೆ I ನನಗಭಿಮುಖನಾಗಿ ತೋರು ನೀ ಮಮತೆ II


ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ನಾ ಬದುಕುವಂತೆ ತೋರೆನಗೆ ನಿನ್ನ ದಯ I ನಿನ್ನ ಧರ್ಮಶಾಸ್ತ್ರ ನನಗೆ ಪರಮಪ್ರಿಯ II


ನಿನ್ನ ನುಡಿಗನುಸಾರ ಉದ್ಧರಿಸು, ನಾ ಬದುಕುವೆ I ನಿರಾಶೆಗೊಳಿಸಬೇಡ ನಾ ನಿರೀಕ್ಷಿಸುತ್ತಿರುವೆ II


ನೀತಿಯುತ ಹಾಗೂ ಶಾಶ್ವತ ನಿನ್ನಾ ಶಾಸನ I ನಾ ಜೀವಿಸುವಂತೆ ದಯಪಾಲಿಸೆನಗೆ ಸುಜ್ಞಾನ II


ಉಳಿಸೆನ್ನ ಪ್ರಾಣವನು, ಭಜಿಪೆ ನಿನ್ನನು I ನೀಡಲಿ ಎನಗೆ ನಿನ್ನ ವಿಧಿಗಳು ನೆರವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು