Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:174 - ಕನ್ನಡ ಸತ್ಯವೇದವು C.L. Bible (BSI)

174 ನನಗೆ ಇಷ್ಟ ನೀನು ನೀಡುವ ಜೀವೋದ್ಧಾರ I ನಿನ್ನ ಧರ್ಮಶಾಸ್ತ್ರ ಎನಗೆ ಸಂತೋಷಕರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

174 ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

174 ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

174 ನಿನ್ನಲ್ಲಿ ರಕ್ಷಣೆಗಾಗಿ ಪ್ರಾರ್ಥಿಸುವೆ. ನಿನ್ನ ಉಪದೇಶಗಳು ನನ್ನನ್ನು ಸಂತೋಷಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

174 ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಬಯಸುತ್ತಿದ್ದೇನೆ, ನಿಮ್ಮ ನಿಯಮವೇ ನನಗೆ ಆನಂದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:174
17 ತಿಳಿವುಗಳ ಹೋಲಿಕೆ  

ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ನಿನ್ನ ಆಜ್ಞೆಗಳಲ್ಲಿದೆ ನನಗಾನಂದ I ಅವುಗಳ ಮೇಲೆಯೆ ನನಗಭಿಮೋದ II


ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.


ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II


ನಾ ಬದುಕುವಂತೆ ತೋರೆನಗೆ ನಿನ್ನ ದಯ I ನಿನ್ನ ಧರ್ಮಶಾಸ್ತ್ರ ನನಗೆ ಪರಮಪ್ರಿಯ II


ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ : “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು :


ದೊರಕಲಿ ಪ್ರಭು ನನಗೆ ನಿನ್ನ ಕರುಣೆ I ನೀನು ವಾಗ್ದಾನಮಾಡಿದಾ ರಕ್ಷಣೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು