Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:19 - ಕನ್ನಡ ಸತ್ಯವೇದವು C.L. Bible (BSI)

19 ಧರೆಯೊಳು ಪ್ರವಾಸಿಯಾಗಿ ನಾನಿರುವೆನಯ್ಯಾ I ನಿನ್ನಾಜ್ಞೆಗಳನು ನನಗೆ ಮರೆಮಾಡಬೇಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ; ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಈ ದೇಶದಲ್ಲಿ ಅಪರಿಚಿತನಾಗಿದ್ದೇನೆ. ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈ ಭೂಮಿಯಲ್ಲಿ ನಾನೊಬ್ಬ ಪ್ರವಾಸಿಯಾಗಿದ್ದೇನೆ; ನಿಮ್ಮ ಆಜ್ಞೆಗಳನ್ನು ನನಗೆ ಮರೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:19
12 ತಿಳಿವುಗಳ ಹೋಲಿಕೆ  

ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಈ ಕಾರಣದಿಂದಲೇ ನಾವು ಸದಾ ಸ್ಥಿರಚಿತ್ತರಾಗಿದ್ದೇವೆ. ಈ ದೇಹವನ್ನೇ ನೆಚ್ಚಿ ಇದರಲ್ಲೇ ನೆಲೆಯಾಗಿರುವವರೆಗೂ ನಾವು ಪ್ರಭುವಿನಿಂದ ದೂರವಿರುವ ಪ್ರವಾಸಿಗಳಂತೆ ಇದ್ದೇವೆ.


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.


ಅದಕ್ಕೆ ನಾನು ಕೊಡಲಿಲ್ಲ ಜ್ಞಾನವನು ದಯಪಾಲಿಸಲಿಲ್ಲ ಗ್ರಹಿಕೆಯನು.


ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು