Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:2 - ಕನ್ನಡ ಸತ್ಯವೇದವು C.L. Bible (BSI)

2 ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:2
24 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಹುಡುಕುವಿರಿ. ಮನಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ನೇಮಿಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.


ದೇವಾಲಯದ ಸೇವಾಸಂಬಂಧದಲ್ಲೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಮುಗಿಸಿ, ತನ್ನ ದೇವರ ಒಲುಮೆಯನ್ನು ಗಳಿಸಿಕೊಂಡನು.


ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.


ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.


ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


ನಿನ್ನ ಕಟ್ಟಳೆಗಳನು ಕೈಗೊಂಡು ನಡೆವವನು ನಾನು I ನನಗಿರುವ ನಿಂದಾಪಮಾನಗಳನು ತೊಲಗಿಸು ನೀನು II


ಉದ್ಧರಿಸೆನ್ನನು, ನಿನಗೆ ಮೊರೆಯಿಡುವೆ I ನಿನ್ನ ಕಟ್ಟಳೆಗಳನು ಕೈಗೊಳ್ಳುವೆ II


ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.


ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II


ನಿನ್ನ ನಿಬಂಧನೆಯನು, ಪ್ರಭು, ಕಲಿಸೆನಗೆ I ಅದರಂತೆಯೇ ನಡೆಯುವೆನು ಕಡೆಯವರೆಗೆ II


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ಹೇ ಪ್ರಭು, ನೀನೇ ನನ್ನ ಪಾಲಿನ ಸ್ವಾಸ್ತ್ಯ I ನಿನ್ನ ವಾಕ್ಯದ ಪಾಲನೆಯೆ ನಾಗೈದ ನಿರ್ಣಯ II


ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II


ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು I ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು II


ನಿನ್ನ ವಾಕ್ಯವನು ಅನುಸರಿಸುವ ಧ್ಯೇಯದಿಂದ I ನನ್ನ ಹೆಜ್ಜೆಗಳನು ತಡೆದೆನು ದುರ್ಮಾರ್ಗದಿಂದ II


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು