Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:22 - ಕನ್ನಡ ಸತ್ಯವೇದವು C.L. Bible (BSI)

22 ನಿನ್ನ ಕಟ್ಟಳೆಗಳನು ಕೈಗೊಂಡು ನಡೆವವನು ನಾನು I ನನಗಿರುವ ನಿಂದಾಪಮಾನಗಳನು ತೊಲಗಿಸು ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ, ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದ ನನಗಿರುವ ನಿಂದಾಪಮಾನಗಳನ್ನು ತೊಲಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನನ್ನು ಅವಮಾನಕ್ಕೂ ನಾಚಿಕೆಗೂ ಗುರಿಮಾಡಬೇಡ. ನಾನು ನಿನ್ನ ಒಡಂಬಡಿಕೆಗೆ ವಿಧೇಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ನಿಮ್ಮ ಶಾಸನಗಳನ್ನು ಕೈಗೊಂಡ ಕಾರಣ, ಗರ್ವಿಷ್ಠರ ನಿಂದೆಯನ್ನೂ, ತಿರಸ್ಕಾರವನ್ನೂ ನನ್ನಿಂದ ತೊಲಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:22
18 ತಿಳಿವುಗಳ ಹೋಲಿಕೆ  

ತೊಲಗಲಿ ನಾನಂಜುವ ಅಪಮಾನವು I ನಿನ್ನ ವಿಧಿಗಳು ನನಗೆ ಹಿತಕರವಾದುವು II


ಮುಕ್ತಗೊಳಿಸೆನ್ನ ಪ್ರಭು, ಎಲ್ಲಪರಾಧಗಳಿಂದ I ಕಾದಿರಿಸೆನ್ನನು ಮೂರ್ಖರ ತಿರಸ್ಕಾರದಿಂದ II


ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ಕೊಡುವೆನಾಗ ಸದುತ್ತರವನು ನಿಂದಕನಿಗೆ I ಕಾರಣ, ನಿನ್ನ ವಾಕ್ಯದಲೆ ಇದೆ ನನಗೆ ನಂಬಿಕೆ II


“ನಿನ್ನ ದೇವನೆಲ್ಲಿ?” ಎಂದು ವಿರೋಧಿಗಳು ಸತತ ಹಂಗಿಸುವಾಗ I ನನ್ನೆಲುಬುಗಳು ಮುರಿದಂತಾಗುತ್ತದೆ ಆ ಜರೆಯ ಕೇಳಿದಾಗ II


ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು