Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:25 - ಕನ್ನಡ ಸತ್ಯವೇದವು C.L. Bible (BSI)

25 ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ; ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನನಗೆ ಸಾವು ಸಮೀಪಿಸಿದೆ. ಯೆಹೋವನೇ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನು ಧೂಳಿನಲ್ಲಿ ಬಿದ್ದಿದ್ದೇನೆ; ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:25
22 ತಿಳಿವುಗಳ ಹೋಲಿಕೆ  

ನಿನ್ನ ನೇಮನಿಯಮಗಳು ಪ್ರಭು, ಎನಿತೋ ಪ್ರಿಯ I ಕಾಪಾಡೆನ್ನನು ನಿನ್ನ ಪ್ರೀತಿಗನುಸಾರ II


ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II


ಜೀವಿಸಮಾಡೆನ್ನನು ಪ್ರಭು, ನಿನ್ನ ನಾಮದ ನಿಮಿತ್ತ I ನಿನ್ನ ನೀತಿಗನುಸಾರ ಬಿಡಿಸೆನ್ನ ಪ್ರಾಣವನು ಆಪತ್ತಿನಿಂದ II


ಮಣ್ಣುಪಾಲಾಗಿದೆ ನಮ್ಮ ಪ್ರಾಣ I ನೆಲ ಕಚ್ಚಿಕೊಂಡಿದೆ ನಮ್ಮ ದೇಹ II


ನೀವು ಕ್ರಿಸ್ತಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ.


ನಿನ್ನ ಕೃಪಾಕಾರ್ಯಗಳು, ಹೇ ಪ್ರಭೂ, ಅಪಾರ I ಚೇತನಗೊಳಿಸೆನ್ನನು, ನಿನ್ನ ವಿಧಿಗಳಿಗನುಸಾರ II


ಮರೆಯೆ ನಾನೆಂದಿಗೂ ನಿನ್ನ ನಿಯಮಗಳನು I ಅವುಗಳಿಂದಲೇ ನನಗಿತ್ತೆ ನವಜೀವನವನು II


ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು I ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು II


ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


ಆಗ ಬಿಟ್ಟಗಲುವುದಿಲ್ಲ ನಾವೆಂದೆಂದಿಗು ನಿನ್ನನು I ಪುನರ್ಜೀವಗೊಳಿಸು, ಮಾಳ್ಪೆವು ನಿನ್ನ ನಾಮಸ್ಮರಣೆಯನು II


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಪ್ರೀತಿಯಿಂದ ಹೇ ಪ್ರಭೂ, ಕೇಳೆನ್ನ ಮೊರೆಯನು I ನಿನ್ನ ವಿಧಿಗನುಸಾರ ಚೇತನಗೊಳಿಸೆನ್ನನು II


ಕುಗ್ಗಿಹೋಗಿರುವೆನು ಪ್ರಭು ಅತ್ಯಧಿಕವಾಗಿ I ಚೇತನಗೊಳಿಸು ನಿನ್ನ ವಾಕ್ಯಾನುಸಾರವಾಗಿ II


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ಎದ್ದು ಬಂದು ಪ್ರಭು ನಿನ್ನ ನೆರವನ್ನೊದಗಿಸು I ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು