Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:26 - ಕನ್ನಡ ಸತ್ಯವೇದವು C.L. Bible (BSI)

26 ನನ್ನ ಗತನಡತೆಯನು ಕೇಳಿ ಸದುತ್ತರಿಸಿದೆಯಯ್ಯಾ I ನಿನ್ನ ನಿಬಂಧನೆಗಳನೀಗ ನನಗೆ ಉಪದೇಶಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ, ನನಗೆ ಸದುತ್ತರವನ್ನು ದಯಪಾಲಿಸಿದಿ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ ನನಗೆ ಸದುತ್ತರವನ್ನು ದಯಪಾಲಿಸಿದಿ; ನಿನ್ನ ನಿಬಂಧನೆಗಳನ್ನು ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನ ಜೀವಿತದ ಬಗ್ಗೆ ನಿನ್ನೊಂದಿಗೆ ಹೇಳಿಕೊಂಡೆ. ಆಗ ನೀನು ನನಗೆ ಉತ್ತರಿಸಿದೆ. ಈಗ ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ನನ್ನ ಮಾರ್ಗಗಳನ್ನು ಲೆಕ್ಕ ಒಪ್ಪಿಸಲು, ನೀವು ನನಗೆ ಸದುತ್ತರವನ್ನು ಕೊಟ್ಟಿರುವಿರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:26
15 ತಿಳಿವುಗಳ ಹೋಲಿಕೆ  

ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು I ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು II


ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಸ್ತುತಿ ಸಲ್ಲಲಿ ಪ್ರಭು ನಿನಗೆ I ನಿನ್ನ ಆಜ್ಞೆಗಳನು ಕಲಿಸು ಎನಗೆ II


ನಾನಪರಾಧಿಯೆಂದು ನಿವೇದಿಸುವೆ I ಪಾಪಕ್ಕಾಗಿ ಪಶ್ಚಾತ್ತಾಪ ಪಡುವೆ II


ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು