Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:28 - ಕನ್ನಡ ಸತ್ಯವೇದವು C.L. Bible (BSI)

28 ದುಃಖದಿಂದ ಸೊರಗಿಹೋಗಿದೆ ಎನ್ನಮನ I ನಿನ್ನ ವಾಕ್ಯಾನುಸಾರ ನೀಡು ಸಾಂತ್ವನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮನೋವ್ಯಥೆಯಿಂದ ಕಣ್ಣೀರುಸುರಿಸುತ್ತೇನೆ; ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ದುಃಖಗೊಂಡಿರುವೆ ಮತ್ತು ಆಯಾಸಗೊಂಡಿರುವೆ. ನೀನು ನನ್ನನ್ನು ಜ್ಞಾಪಿಸಿಕೊಂಡು ಮತ್ತೆ ಬಲಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನನ್ನ ಪ್ರಾಣವು ದುಃಖದಿಂದ ಬಲಹೀನವಾಗಿದೆ; ನಿಮ್ಮ ವಾಕ್ಯದಿಂದ ನನ್ನನ್ನು ಬಲಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:28
14 ತಿಳಿವುಗಳ ಹೋಲಿಕೆ  

ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.


ಗಗನಕ್ಕೇರಿದರು, ಅಗಾಧಕ್ಕಿಳಿದರು I ಗಂಡಾಂತರಕೆ ಸಿಲುಕಿ ಕರಗಿಹೋದರು II


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.


ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.


ನೆರವು ನೀಡಲಾತ ಪವಿತ್ರಾಲಯದಿಂದ I ನಿನಗೊತ್ತಾಸೆ ಬರಲಿ, ಸಿಯೋನ್ ಶಿಖರದಿಂದ II


ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು