Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:29 - ಕನ್ನಡ ಸತ್ಯವೇದವು C.L. Bible (BSI)

29 ಮಿಥ್ಯಮಾರ್ಗವನು ನನಗೆ ದೂರಮಾಡಯ್ಯಾ I ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು, ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ವಿುಥ್ಯಾಮಾರ್ಗವನ್ನು ನನಗೆ ದೂರಮಾಡು; ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ವಂಚನೆಯುಳ್ಳ ಮಾರ್ಗದಿಂದ ನನ್ನನ್ನು ಕಾಪಾಡಿರಿ; ನನಗೆ ಕೃಪೆ ನೀಡಿ ನಿಮ್ಮ ನಿಯಮವನ್ನು ನನಗೆ ಬೋಧನೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:29
16 ತಿಳಿವುಗಳ ಹೋಲಿಕೆ  

ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಹಿಡಿಸದು ಎನಗೆ ಮಿಥ್ಯವಾದುದು, ಅದು ಎನಗೆ ಅಸಹ್ಯ I ನಿನ್ನ ಧರ್ಮಶಾಸ್ತ್ರವಾದರೋ ನನಗೆ ಸುಪ್ರಿಯ II


ವಿವೇಕಿಯಾದೆನು ನಿನ್ನ ನಿಯಮಗಳ ಮೂಲಕ I ದ್ವೇಷಿಸುತಿಹೆನು ಪ್ರತಿಯೊಂದು ಮಿಥ್ಯಾ ಮಾರ್ಗ II


ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು