Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:31 - ಕನ್ನಡ ಸತ್ಯವೇದವು C.L. Bible (BSI)

31 ಅಂಟಿಕೊಂಡಿರುವೆನು ನಿನ್ನ ಕಟ್ಟಳೆಗಳಿಗೆ I ಆಶಾಭಂಗಪಡಿಸಬೇಡ ಪ್ರಭು ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ, ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ; ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿನ್ನ ಒಡಂಬಡಿಕೆಗೆ ಅಂಟಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೋವ ದೇವರೇ, ನಾನು ನಿಮ್ಮ ಶಾಸನಗಳನ್ನು ಬಿಗಿಯಾಗಿಟ್ಟುಕೊಂಡಿದ್ದೇನೆ; ನನ್ನನ್ನು ನಾಚಿಕೆಗೆ ಗುರಿಪಡಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:31
17 ತಿಳಿವುಗಳ ಹೋಲಿಕೆ  

ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


ಕಾಪಾಡು ಪ್ರಭು, ರಕ್ಷಿಸೆನ್ನ ಪ್ರಾಣವನು I ನಿರಾಶೆಗೊಳಿಸಬೇಡ, ಶರಣಾಗತನು ನಾನು II


ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II


ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ !


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II


ನಾ ಕೈಯೊಡ್ಡಿ ಕೇಳುವುದು ನಿನ್ನ ಆಜ್ಞೆಗಳನೆ I ನನಗೆ ಪ್ರಿಯ, ಧ್ಯಾನಾರ್ಹ, ನಿನ್ನ ನಿಬಂಧನೆ II


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


“ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆದು, ಅವರನ್ನೇ ಹೊಂದಿಕೊಂಡಿದ್ದರೆ,


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು