Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:35 - ಕನ್ನಡ ಸತ್ಯವೇದವು C.L. Bible (BSI)

35 ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ I ಪಡೆಯುವೆ ಹರ್ಷಾನಂದವನು ಅದರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು, ಅದೇ ನನ್ನ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡಿಸು; ಅದೇ ನನ್ನ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಿನ್ನ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸು. ಆ ಮಾರ್ಗವೇ ನನಗೆ ಬಹು ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸಿರಿ, ಏಕೆಂದರೆ ನಾನು ಅದರಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:35
19 ತಿಳಿವುಗಳ ಹೋಲಿಕೆ  

ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II


ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು I ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು II


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ಜ್ಞಾನಮಾರ್ಗವನ್ನು ನಿನಗೆ ಉಪದೇಶಿಸುವೆನು. ಸತ್ಯಮಾರ್ಗದಲ್ಲಿ ನಿನ್ನನ್ನು ನಡೆಸುವೆನು.


ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ಆಕೆಯ ದಾರಿ ಸುಖಕರ, ಆಕೆಯ ಮಾರ್ಗ ಕ್ಷೇಮಕರ.


ಆರಿಸಿಕೊಂಡೆ ನಿನ್ನ ನಿಯಮಗಳನು I ನಿನ್ನ ಕೈ ನೀಡಲಿ ನನಗೆ ನೆರವನು II


ತಿರುಗಿಸೆನ್ನ ಮನವ ನಿನ್ನ ಕಟ್ಟಳೆಯ ಕಡೆ I ಲಾಭಲೋಭದತ್ತ ಅದು ಸರಿಯದಂತೆ ತಡೆ II


ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು