Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:38 - ಕನ್ನಡ ಸತ್ಯವೇದವು C.L. Bible (BSI)

38 ಭಯಭಕ್ತ ಜನತೆಗೆ ನೀನಿತ್ತಾ ಮಾತು I ದಾಸನಾದ ನನ್ನಲಿ ನೆರವೇರಲಿ ಇಂತು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು, ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನೀನು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೋಸ್ಕರ ಹೇಳಿದ ನುಡಿಯನ್ನು ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಿನ್ನ ಸೇವಕನಾದ ನನಗೆ ನೀನು ಮಾಡಿದ ವಾಗ್ದಾನಗಳನ್ನು ನೆರವೇರಿಸು. ಆಗ ಜನರು ನಿನ್ನನ್ನು ಗೌರವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನಿಮಗೆ ಭಯಪಡುವವರಿಗಾಗಿ ನೀಡುವ ವಾಗ್ದಾನವನ್ನು ನಿಮ್ಮ ಸೇವಕನಿಗೆ ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:38
13 ತಿಳಿವುಗಳ ಹೋಲಿಕೆ  

ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I ಕನಿಕರಿಸುವನಾತ ತನಗೆ ಅಂಜುವವರಿಗೆ II


ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಸ್ಮರಿಸಿಕೋ ದಾಸನೆನಗೆ ನೀನಿತ್ತಾ ಮಾತನು I ಹುಟ್ಟಿಸಿರುವೆ ನನ್ನೊಳು ನಂಬಿಕೆ, ನಿರೀಕ್ಷೆಗಳನು II


ಇಸ್ರಯೇಲ್ ದೇವರೇ, ನೀವು ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!


ನಿನ್ನ ನುಡಿ ತರುತ್ತದೆನಗೆ ನವಚೇತನ I ಆಪತ್ಕಾಲದಲಿ ನನಗದೇ ಸಾಂತ್ವನ II


ನಿನ್ನ ದಾಸನಿಗೆ ನೀನು ನುಡಿದ ಪ್ರಕಾರ I ಸಾಂತ್ವನ ನೀಡಲಿ ನನಗೆ ನಿನ್ನಚಲ ಒಲವರ II


ನನ್ನ ಪರ ವಾದಿಸಿ, ಬಿಡುಗಡೆ ಮಾಡು ಎನ್ನನು I ನಿನ್ನ ನುಡಿಗನುಸಾರ ಚೇತನಗೊಳಿಸು ನನ್ನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು