Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ನೇಮಗಳನು ಪ್ರಭೂ, ನೀನೆ ವ್ಯಕ್ತಪಡಿಸಿರುವೆಯಯ್ಯಾ I ಜಾಗರೂಕತೆಯಿಂದ ಪಾಲಿಸಬೇಕೆಂದು ನೀ ವಿಧಿಸಿರುವೆಯಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ನೇಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡಿಸಬೇಕೆಂದು ನೀನೇ ಆಜ್ಞಾಪಿಸಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರೇ, ನಿಮ್ಮ ಸೂತ್ರಗಳನ್ನು ಪೂರ್ಣವಾಗಿ ಕೈಗೊಳ್ಳಬೇಕೆಂದು ನೀವು ಆಜ್ಞಾಪಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:4
20 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.


ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.


“ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆದು, ಅವರನ್ನೇ ಹೊಂದಿಕೊಂಡಿದ್ದರೆ,


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ನೇಮಿಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ,


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಸರ್ವೇಶ್ವರ ಸ್ವಾಮಿಯ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


:ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಗೊಂಡು ನಡೆಯಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು