Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:40 - ಕನ್ನಡ ಸತ್ಯವೇದವು C.L. Bible (BSI)

40 ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ವಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಇಗೋ, ನಿನ್ನ ನೇಮಗಳನ್ನು ಪ್ರೀತಿಸುತ್ತೇನೆ; ನಿನ್ನ ನೀತಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಇಗೋ ನಿಮ್ಮ ಸೂತ್ರಗಳಿಗಾಗಿ ನಾನು ಎಷ್ಟೋ ಹಂಬಲಿಸುತ್ತೇನೆ! ನಿಮ್ಮ ನೀತಿಗನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:40
20 ತಿಳಿವುಗಳ ಹೋಲಿಕೆ  

ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ನಿನ್ನ ನೇಮನಿಯಮಗಳು ಪ್ರಭು, ಎನಿತೋ ಪ್ರಿಯ I ಕಾಪಾಡೆನ್ನನು ನಿನ್ನ ಪ್ರೀತಿಗನುಸಾರ II


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II


ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).


ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.


ನಿನ್ನ ಕೃಪಾಕಾರ್ಯಗಳು, ಹೇ ಪ್ರಭೂ, ಅಪಾರ I ಚೇತನಗೊಳಿಸೆನ್ನನು, ನಿನ್ನ ವಿಧಿಗಳಿಗನುಸಾರ II


ಪ್ರೀತಿಯಿಂದ ಹೇ ಪ್ರಭೂ, ಕೇಳೆನ್ನ ಮೊರೆಯನು I ನಿನ್ನ ವಿಧಿಗನುಸಾರ ಚೇತನಗೊಳಿಸೆನ್ನನು II


ಕುಗ್ಗಿಹೋಗಿರುವೆನು ಪ್ರಭು ಅತ್ಯಧಿಕವಾಗಿ I ಚೇತನಗೊಳಿಸು ನಿನ್ನ ವಾಕ್ಯಾನುಸಾರವಾಗಿ II


ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು I ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು II


ಪ್ರಿಯನೇ, ಎಲ್ಲಾ ವಿಷಯಗಳಲ್ಲಿ ನಿನಗೆ ಶುಭವನ್ನು ಕೋರುತ್ತೇನೆ; ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಆತ್ಮದ ವಿಷಯದಲ್ಲಿ ನೀನು ಅಭಿವೃದ್ಧಿಗೊಳ್ಳುತ್ತಿರುವೆ ಎಂದು ನಂಬಿದ್ದೇನೆ.


ಅಯ್ಯೋ, ನಾನೆಂಥ ನಿರ್ಭಾಗ್ಯನು! ಸಾವಿನ ದವಡೆಗೆ ಸಿಕ್ಕಿರುವ ಈ ಶರೀರದಿಂದ ನನ್ನನ್ನು ಬಿಡಿಸುವವರು ಯಾರು?


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಆಗ ಆ ಬಾಲಕನ ತಂದೆ, “ನಾನು ವಿಶ್ವಾಸಿಸುತ್ತೇನೆ, ನನ್ನ ವಿಶ್ವಾಸದಲ್ಲಿ ಕೊರತೆಯಿದ್ದರೆ ನೆರವು ನೀಡಿ,” ಎಂದು ಯೇಸುವಿಗೆ ಮೊರೆಯಿಟ್ಟನು.


ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು