Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:43 - ಕನ್ನಡ ಸತ್ಯವೇದವು C.L. Bible (BSI)

43 ತೆಗೆಯಬೇಡ ನನ್ನ ಬಾಯಿಂದ ಸತ್ಯವನು I ನಂಬಿಕೊಂಡಿರುವೆ ನಿನ್ನ ನ್ಯಾಯವಿಧಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಿನ್ನ ಸತ್ಯೋಪದೇಶಗಳನ್ನು ನಾನು ಯಾವಾಗಲೂ ಮಾತಾಡುವಂತಾಗಲಿ. ನಿನ್ನ ಜ್ಞಾನದ ನಿರ್ಧಾರಗಳನ್ನೇ ನಾನು ಆಶ್ರಯಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡಿರಿ, ಏಕೆಂದರೆ ನಿಮ್ಮ ನಿಯಮಗಳಲ್ಲಿ ನಾನು ನನ್ನ ನಿರೀಕ್ಷೆಯನ್ನಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:43
19 ತಿಳಿವುಗಳ ಹೋಲಿಕೆ  

ನ್ಯಾಯಪೀಠದಲಿ ಕುಳಿತೆನ್ನ ವ್ಯಾಜ್ಯ ತೀರಿಸಿದೆ I ನೀತಿಗನುಸಾರವಾಗಿ ನ್ಯಾಯ ಸ್ಥಾಪಿಸಿದೆ II


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.


ಉಳಿಸೆನ್ನ ಪ್ರಾಣವನು, ಭಜಿಪೆ ನಿನ್ನನು I ನೀಡಲಿ ಎನಗೆ ನಿನ್ನ ವಿಧಿಗಳು ನೆರವನು II


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ನಿನ್ನ ಪ್ರಾಚೀನ ವಿಧಿಗಳ ಜ್ಞಾಪನ I ತರುತ್ತದೆನಗೆ ಹೇ ಪ್ರಭೂ, ಸಾಂತ್ವನ II


ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಿನ್ನಾ ವಾಕ್ಯದಲಿ ನಾನಿತ್ತ ನಿರೀಕ್ಷೆಯಿಂದ I ಭಯಭಕ್ತಿಯುಳ್ಳವನು ನೋಡಿ ಪಡೆದನು ಆನಂದ II


ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II


ನನ್ನಾಶ್ರಯವೂ ಕವಚವೂ ನೀನೇ I ನಿರೀಕ್ಷಿಸುತಿರುವೆ ನಿನ್ನ ವಾಕ್ಯವನೆ II


ಅರುಣೋದಯದಲೆದ್ದು ಮೊರೆಯಿಟ್ಟೆನು I ನಿನ್ನ ವಾಕ್ಯದಲೆ ನಂಬಿಕೆಯಿಟ್ಟೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು