Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:49 - ಕನ್ನಡ ಸತ್ಯವೇದವು C.L. Bible (BSI)

49 ಸ್ಮರಿಸಿಕೋ ದಾಸನೆನಗೆ ನೀನಿತ್ತಾ ಮಾತನು I ಹುಟ್ಟಿಸಿರುವೆ ನನ್ನೊಳು ನಂಬಿಕೆ, ನಿರೀಕ್ಷೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ, ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ; ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದೀಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ನಿನ್ನ ವಾಗ್ದಾನವನ್ನು ನನಗೋಸ್ಕರ ನೆನಪು ಮಾಡಿಕೋ. ಆ ವಾಗ್ದಾನವೇ ನನ್ನ ನಿರೀಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ನಿಮ್ಮ ಸೇವಕನಿಗೋಸ್ಕರ ನಿಮ್ಮ ವಾಕ್ಯವನ್ನು ನೀವು ಜ್ಞಾಪಕಮಾಡಿಕೊಳ್ಳಿರಿ, ಏಕೆಂದರೆ ನೀವು ನನಗೆ ನಿರೀಕ್ಷೆಯನ್ನು ಕೊಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:49
18 ತಿಳಿವುಗಳ ಹೋಲಿಕೆ  

“ದೇವರೇ, ಸರ್ವೆಶ್ವರಾ, ತಾವು ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


ಮರೆಯಬೇಡೆನ್ನನು ಪ್ರಭು, ನಿನ್ನ ಪ್ರಜೆಗೆ ದಯೆತೋರುವಾಗ I ನೆರವು ನೀಡೆನಗೆ ಸ್ವಾಮಿ, ನೀನಾ ಜನರನು ಉದ್ಧರಿಸುವಾಗ II


ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II


ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು I ತನ್ನ ದಾಸ ಅಬ್ರಹಾಮನಿಗೆ ಕೊಟ್ಟಾ ಮಾತನು II


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ನಿನ್ನಾ ವಾಕ್ಯದಲಿ ನಾನಿತ್ತ ನಿರೀಕ್ಷೆಯಿಂದ I ಭಯಭಕ್ತಿಯುಳ್ಳವನು ನೋಡಿ ಪಡೆದನು ಆನಂದ II


ನಾನಂತು ನಂಬಿರುವೆ ನಿನ್ನ ನಿರಂತರವಾಗಿ I ನಿನ್ನನು ಕೀರ್ತಿಸುತ್ತಿರುವೆ ಅಧಿಕಾಧಿಕವಾಗಿ II


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ಅರುಣೋದಯದಲೆದ್ದು ಮೊರೆಯಿಟ್ಟೆನು I ನಿನ್ನ ವಾಕ್ಯದಲೆ ನಂಬಿಕೆಯಿಟ್ಟೆನು II


ತೆಗೆಯಬೇಡ ನನ್ನ ಬಾಯಿಂದ ಸತ್ಯವನು I ನಂಬಿಕೊಂಡಿರುವೆ ನಿನ್ನ ನ್ಯಾಯವಿಧಿಯನು II


ಹಾಡಿ ಪಾಡಿ ಹೊಗಳಿರಿ ಪ್ರಭುವನು I ಧ್ಯಾನಿಸಿ ನೀವು ಆತನ ಪವಾಡಗಳನು II


ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು