Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:5 - ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದರಲ್ಲಿ ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಕಟ್ಟಳೆಗಳಿಗೆ ನಾನು ಯಾವಾಗಲೂ ವಿಧೇಯನಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ ನನ್ನ ಮಾರ್ಗಗಳು ಸ್ಥಿರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:5
11 ತಿಳಿವುಗಳ ಹೋಲಿಕೆ  

ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ತಿರುಗಿಸೆನ್ನ ಮನವ ನಿನ್ನ ಕಟ್ಟಳೆಯ ಕಡೆ I ಲಾಭಲೋಭದತ್ತ ಅದು ಸರಿಯದಂತೆ ತಡೆ II


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


ಆರಿಸಿಕೊಂಡೆ ನಿನ್ನ ನಿಯಮಗಳನು I ನಿನ್ನ ಕೈ ನೀಡಲಿ ನನಗೆ ನೆರವನು II


ನಿನ್ನ ನೇಮನಿಯಮಗಳು ಪ್ರಭು, ಎನಿತೋ ಪ್ರಿಯ I ಕಾಪಾಡೆನ್ನನು ನಿನ್ನ ಪ್ರೀತಿಗನುಸಾರ II


ಬಾಯ್ದೆರೆದು ಹಾತೊರೆಯುತಿರುವೆ I ನಿನ್ನ ಆಜ್ಞೆಗಳನು ಅರಸುತಿರುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು