Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:51 - ಕನ್ನಡ ಸತ್ಯವೇದವು C.L. Bible (BSI)

51 ಹಾಸ್ಯ ಅಪಹಾಸ್ಯ ಮಾಡಿದರು ಗರ್ವಿಷ್ಠರೆನ್ನನು I ಆದರೂ ನಾ ಬಿಡಲಿಲ್ಲ ನಿನ್ನ ಧರ್ಮಶಾಸ್ತ್ರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಗರ್ವಿಷ್ಠರು ನನ್ನನ್ನು ಬಹಳವಾಗಿ ಹಾಸ್ಯಮಾಡಿದರು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಗರ್ವಿಷ್ಠರು ನನ್ನನ್ನು ಗೇಲಿಮಾಡುತ್ತಲೇ ಇದ್ದರು. ನಾನಾದರೋ ನಿನ್ನ ಉಪದೇಶಗಳನ್ನು ಅನುಸರಿಸುತ್ತಲೇ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅಹಂಕಾರಿಗಳು ನನ್ನನ್ನು ಕರುಣಿಸದೆ ಹಾಸ್ಯ ಮಾಡಿದರೂ, ನಾನು ನಿಮ್ಮ ನಿಯಮದಿಂದ ತೊಲಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:51
14 ತಿಳಿವುಗಳ ಹೋಲಿಕೆ  

ಆತನ ಹೆಜ್ಜೆಯ ಜಾಡಿನಲ್ಲೆ ನಾನು ಕಾಲಿಟ್ಟೆ ಓರೆಯಾಗದೆ ಆತನ ದಾರಿಯನ್ನೇ ಹಿಡಿದೆ.


ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.


ದ್ವೇಷಿಸಿದರು, ಹಿಂಸಿಸಿದರು, ಹಲವರು ನನ್ನನು I ಆದರೂ ಬಿಟ್ಟಿಲ್ಲ ನಾನು ನಿನ್ನ ಕಟ್ಟಳೆಗಳನು II


ನಮ್ಮಂತರಂಗ ದೂರವಾಗಿಲ್ಲ ನಿನ್ನಿಂದ I ನಾವು ಅಗಲಲಿಲ್ಲ ನೀನು ತೋರಿದ ಮಾರ್ಗದಿಂದ II


ಜನರು ನೋಡುತ್ತಾ ನಿಂತಿದ್ದರು. ಅಲ್ಲಿದ್ದ ಮುಖಂಡರು ಯೇಸುವನ್ನು ಮೂದಲಿಸುತ್ತಾ, “ಇವನು ಇತರರನ್ನು ರಕ್ಷಿಸಿದ; ಇವನು ದೇವರಿಂದಲೇ ಅಭಿಷಿಕ್ತನಾದ ಲೋಕೋದ್ಧಾರಕನು ಮತ್ತು ಅವರಿಂದಲೇ ಆಯ್ಕೆಯಾದವನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.


ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II


ಅಂಟಿಕೊಂಡಿರುವೆನು ನಿನ್ನ ಕಟ್ಟಳೆಗಳಿಗೆ I ಆಶಾಭಂಗಪಡಿಸಬೇಡ ಪ್ರಭು ನನಗೆ II


ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು