Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:55 - ಕನ್ನಡ ಸತ್ಯವೇದವು C.L. Bible (BSI)

55 ರಾತ್ರಿಯೊಳೂ ಮಾಡಿದೆ ನಿನ್ನ ನಾಮಸ್ಮರಣೆಯನು I ಕೈಗೊಂಡೆನು ಹೇ ಪ್ರಭೂ, ನಿನ್ನ ಧರ್ಮಶಾಸ್ತ್ರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ; ನಿನ್ನ ಧರ್ಮಶಾಸ್ತ್ರವನ್ನು ಕೈಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ರಾತ್ರಿಯಲ್ಲಿ ನಾನು ನಿನ್ನ ಹೆಸರನ್ನೂ ನಿನ್ನ ಉಪದೇಶಗಳನ್ನೂ ಜ್ಞಾಪಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಯೆಹೋವ ದೇವರೇ, ರಾತ್ರಿಯಲ್ಲಿ ನಿಮ್ಮ ನಾಮಸ್ಮರಣೆ ಮಾಡುವುದರಿಂದ, ನಿಮ್ಮ ನಿಯಮವನ್ನು ಕೈಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:55
14 ತಿಳಿವುಗಳ ಹೋಲಿಕೆ  

ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II


ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II


ನಿನ್ನ ಧ್ಯಾನ ಬರುತ್ತದೆ ನೆನಪಿಗೆ ರಾತ್ರಿಯೊಳು I ಆಲೋಚನೆ ಸುಳಿಯುತ್ತದೆ ನನ್ನಾಂತರ್ಯದೊಳು I ಈ ತೆರನ ಪ್ರಶ್ನೆಯೇಳುತ್ತದೆನ್ನ ಮನದೊಳು : II


ಸತತ ನಿನ್ನ ಧರ್ಮಶಾಸ್ತ್ರವನು ಕೈಗೊಳ್ಳುವೆ I ಯುಗಯುಗಾಂತರಕು ಅದನು ಪರಿಪಾಲಿಸುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು