Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:58 - ಕನ್ನಡ ಸತ್ಯವೇದವು C.L. Bible (BSI)

58 ನಿನ್ನ ಕರುಣೆಯನು ಕೋರಿದೆನು ಮನಸಾರ I ಪ್ರಸನ್ನನಾಗು ನನಗೆ ನಿನ್ನ ನುಡಿಗನುಸಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ; ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ನಿನ್ನನ್ನೇ ಸಂಪೂರ್ಣವಾಗಿ ಆಶ್ರಯಿಸಿಕೊಂಡಿದ್ದೇನೆ. ನಿನ್ನ ವಾಗ್ದಾನದಂತೆ ನನಗೆ ಕರುಣೆತೋರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಪೂರ್ಣಹೃದಯದಿಂದ ನಾನು ನಿಮ್ಮ ಮುಖವನ್ನು ಹುಡುಕಿದ್ದೇನೆ; ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ಕರುಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:58
18 ತಿಳಿವುಗಳ ಹೋಲಿಕೆ  

ದೊರಕಲಿ ಪ್ರಭು ನನಗೆ ನಿನ್ನ ಕರುಣೆ I ನೀನು ವಾಗ್ದಾನಮಾಡಿದಾ ರಕ್ಷಣೆ II


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ನನ್ನ ವಿಜ್ಞಾಪನೆ ಸೇರಲಿ ನಿನ್ನ ಸನ್ನಿಧಿಗೆ I ಉದ್ಧರಿಸೆನ್ನನು ನಿನ್ನ ನುಡಿಗೆ ತಕ್ಕಹಾಗೆ II


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ನಿನ್ನ ದಾಸನಿಗೆ ನೀನು ನುಡಿದ ಪ್ರಕಾರ I ಸಾಂತ್ವನ ನೀಡಲಿ ನನಗೆ ನಿನ್ನಚಲ ಒಲವರ II


ಹೇ ಪ್ರಭೂ, ನಿನ್ನ ವಾಗ್ದಾನದ ಪ್ರಕಾರ I ಮಾಡಿದೆ ನಿನ್ನ ದಾಸನಿಗೆ ಮಹೋಪಕಾರ II


ನಾ ಹೆಮ್ಮೆಪಡುವುದು ದೇವನಲಿ, ಆತನ ವಾಗ್ದಾನದಲಿ I ನಾ ಹೆಮ್ಮೆಪಡುವುದು ಪ್ರಭುವಿನಲಿ, ಆತನ ವಾಗ್ದಾನದಲಿ II


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II


ಆಗ ನೀನು ವಿಶ್ರಮಿಸುವೆ ಹೆದರಿಕೆಯಿಲ್ಲದೆ ಅನೇಕರಿಗೆ ಬೇಕಾಗುವುದು ನಿನ್ನ ಮುಖಪ್ರಸನ್ನತೆ.


ಸದುತ್ತರಿಸು ಮನಪೂರ್ವಕವಾಗಿ ಮೊರೆಯಿಡುವೆ I ನಿನ್ನ ನಿಬಂಧನೆಗಳನು ಪ್ರಭು, ಅನುಸರಿಸುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು