Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:59 - ಕನ್ನಡ ಸತ್ಯವೇದವು C.L. Bible (BSI)

59 ನನ್ನಯ ನಡತೆಯನು ಪರಿಶೋಧಿಸುತ್ತ I ತಿರುಗಿಕೊಂಡೆನು ನಿನ್ನ ಕಟ್ಟಳೆಯತ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ನನ್ನ ನಡತೆಯನ್ನು ಶೋಧಿಸಿದೆನು. ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ನನ್ನ ಜೀವಿತದ ಕುರಿತು ಎಚ್ಚರಿಕೆಯಿಂದ ಆಲೋಚಿಸಿ ನಿನ್ನ ಕಟ್ಟಳೆಗಳನ್ನು ಅನುಸರಿಸಲು ನಿರ್ಧರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ನಾನು ನನ್ನ ನಡತೆಯನ್ನು ಪರಿಶೋಧಿಸುತ್ತಾ ನನ್ನ ಹೆಜ್ಜೆಗಳನ್ನು ನಿಮ್ಮ ಶಾಸನಗಳ ಕಡೆಗೆ ತಿರುಗಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:59
15 ತಿಳಿವುಗಳ ಹೋಲಿಕೆ  

ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.


ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.


ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ, ಅವುಗಳಿಂದ ಉಳಿಯುವನು.


ಇದನ್ನು ಕೇಳಿದ ಮರಿಯಳು ತಟ್ಟನೆ ಎದ್ದು ಯೇಸುವನ್ನು ಕಾಣಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು