Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:68 - ಕನ್ನಡ ಸತ್ಯವೇದವು C.L. Bible (BSI)

68 ಒಳ್ಳೆಯವ, ಒಳ್ಳೆಯದ ಗೈಕೊಳ್ಳುವ ನೀನು I ಬೋಧಿಸೆನಗೆ ನಿನ್ನಾ ನಿಬಂಧನೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68 ನೀನು ಒಳ್ಳೆಯವನೂ ಒಳ್ಳೆಯದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 ನೀನು ಒಳ್ಳೆಯವನೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಆಗಿರುವೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

68 ನೀವು ಒಳ್ಳೆಯವರೂ, ಒಳ್ಳೆಯದನ್ನು ಮಾಡುವವರೂ ಆಗಿದ್ದೀರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:68
14 ತಿಳಿವುಗಳ ಹೋಲಿಕೆ  

ಸ್ತುತಿ ಸಲ್ಲಲಿ ಪ್ರಭು ನಿನಗೆ I ನಿನ್ನ ಆಜ್ಞೆಗಳನು ಕಲಿಸು ಎನಗೆ II


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.


ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


“ನೀನು ನನ್ನನ್ನು ಒಳ್ಳೆಯವನೆಂದು ಕರೆದುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ;


“ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ. ದೈವಾಜ್ಞೆಗಳು ನಿನಗೆ ತಿಳಿದೇ ಇವೆ:


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ನನ್ನ ಗತನಡತೆಯನು ಕೇಳಿ ಸದುತ್ತರಿಸಿದೆಯಯ್ಯಾ I ನಿನ್ನ ನಿಬಂಧನೆಗಳನೀಗ ನನಗೆ ಉಪದೇಶಿಸಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು