Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:7 - ಕನ್ನಡ ಸತ್ಯವೇದವು C.L. Bible (BSI)

7 ನೀತಿಯುತ ನಿನ್ನ ವಿಧಿಗಳನು ಕಲಿಯುವೆನಯ್ಯಾ I ಯಥಾರ್ಥ ಹೃದಯದಿಂದ ನಿನ್ನ ಸ್ತುತಿಪೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನಿನ್ನ ನೀತಿವಿಧಿಗಳನ್ನು ಕಲಿತಹಾಗೆಲ್ಲಾ ನಿನ್ನನ್ನು ಯಥಾರ್ಥಹೃದಯದಿಂದ ಕೊಂಡಾಡುತ್ತಾ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನಿನ್ನ ನ್ಯಾಯವನ್ನೂ ನೀತಿಯನ್ನೂ ಕಲಿತಂತೆಲ್ಲಾ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮ ನೀತಿಯುಳ್ಳ ನಿಯಮಗಳನ್ನು ಕಲಿಯುತ್ತಿರುವಾಗೆಲ್ಲಾ, ಯಥಾರ್ಥ ಹೃದಯದಿಂದ ನಿಮ್ಮನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:7
16 ತಿಳಿವುಗಳ ಹೋಲಿಕೆ  

ನನಗೆ ಕಲಿಸಿರುವೆ ನಿನ್ನ ನಿಬಂಧನೆಗಳನು I ನನ್ನ ಬಾಯಿ ಉಸುರಲಿ ನಿನ್ನ ಗುಣಗಾನವನು II


ಸ್ತುತಿ ಸಲ್ಲಲಿ ಪ್ರಭು ನಿನಗೆ I ನಿನ್ನ ಆಜ್ಞೆಗಳನು ಕಲಿಸು ಎನಗೆ II


‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ಮನಃಪೂರ್ವಕವಾಗಿ ಪ್ರಭು, ನಿನ್ನ ಕೊಂಡಾಡುವೆನು I ನಿನ್ನದ್ಭುತಕಾರ್ಯಗಳೆಲ್ಲವನು ನಾ ವರ್ಣಿಸುವೆನು II


ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II


ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II


ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II


ಪ್ರಭು, ನಿನ್ನಚಲ ಪ್ರೀತಿಯಿಂದ ಜಗ ತುಂಬಿದೆ I ನೀಡೆನಗೆ ಪ್ರಭು, ನಿನ್ನ ನಿಬಂಧನೆಗಳ ಬೋಧೆ II


ಕೃಪೆಯಿಂದ ನಡೆಸು ನಿನ್ನ ದಾಸನನು I ಕಲಿಸೆನಗೆ ನಿನ್ನ ನಿಬಂಧನೆಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು