Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:70 - ಕನ್ನಡ ಸತ್ಯವೇದವು C.L. Bible (BSI)

70 ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಅವರ ಹೃದಯದಲ್ಲಿ ಸತ್ಯವಿಲ್ಲ, ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

70 ಕೊಬ್ಬಿನಂತೆ ಅವರ ಬುದ್ಧಿ ಮಂದವಾಯಿತು; ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಅವರು ಬಹು ಮೂಢರು. ನಾನಾದರೋ ನಿನ್ನ ಉಪದೇಶಗಳನ್ನು ಕಲಿಯುವುದರಲ್ಲಿ ಆನಂದಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

70 ಅವರ ಹೃದಯವು ಕಠಿಣವೂ ಮಂದವೂ ಆಗಿದೆ, ನಾನಾದರೋ ನಿಮ್ಮ ನಿಯಮದಲ್ಲಿ ಆನಂದಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:70
8 ತಿಳಿವುಗಳ ಹೋಲಿಕೆ  

ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II


ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’


ದೋಷ ಹೊರಸೂಸುತ್ತಿದೆ ಕೊಬ್ಬಿನಾ ಕಣ್ಗಳಿಂದ I ದುಷ್ಕಲ್ಪನೆಗಳು ತುಳುಕುತಿವೆ ಹೃನ್ಮನಗಳಿಂದ II


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ I ಪಡೆಯುವೆ ಹರ್ಷಾನಂದವನು ಅದರಲಿ II


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು