Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:75 - ಕನ್ನಡ ಸತ್ಯವೇದವು C.L. Bible (BSI)

75 ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

75 ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

75 ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ ನೀನು ನಂಬಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

75 ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

75 ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:75
13 ತಿಳಿವುಗಳ ಹೋಲಿಕೆ  

ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಸತ್ಯವೇ ನಿನ್ನ ವಾಕ್ಯದ ಸಾರಾಂಶ I ನಿನ್ನಯ ನೀತಿವಿಧಿಗಳೆಲ್ಲವೂ ಅನಿಶ II


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ನ್ಯಾಯಯುತ ನಿನ್ನ ವಿಧಿಗೋಸ್ಕರ ವಂದಿಸಲು I ನಾನು ಎಚ್ಚರಗೊಳ್ಳುವೆ ಮಧ್ಯರಾತ್ರಿಯೊಳು II


ನೀತಿಯುತ ನಿನ್ನ ವಿಧಿಗಳನು ಕಲಿಯುವೆನಯ್ಯಾ I ಯಥಾರ್ಥ ಹೃದಯದಿಂದ ನಿನ್ನ ಸ್ತುತಿಪೆನಯ್ಯಾ II


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ ಅವನನ್ನು ನ್ಯಾಯವಿಚಾರಣೆಗೆ ಕರೆಯುವ ಅವಶ್ಯಕತೆ ಇಲ್ಲ.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು