Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:77 - ಕನ್ನಡ ಸತ್ಯವೇದವು C.L. Bible (BSI)

77 ನಾ ಬದುಕುವಂತೆ ತೋರೆನಗೆ ನಿನ್ನ ದಯ I ನಿನ್ನ ಧರ್ಮಶಾಸ್ತ್ರ ನನಗೆ ಪರಮಪ್ರಿಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

77 ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

77 ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

77 ನನ್ನನ್ನು ಸಂತೈಸಿ ಉಜ್ಜೀವನಗೊಳಿಸು; ನಾನು ನಿನ್ನ ಉಪದೇಶಗಳಲ್ಲಿಯೇ ಆನಂದಿಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

77 ನಾನು ಜೀವಿಸುವಂತೆ ನಿಮ್ಮ ಅನುಕಂಪವು ನನಗೆ ಬರಲಿ, ಏಕೆಂದರೆ ನಿಮ್ಮ ನಿಯಮವೇ ನನ್ನ ಆನಂದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:77
11 ತಿಳಿವುಗಳ ಹೋಲಿಕೆ  

ನನಗೆ ಇಷ್ಟ ನೀನು ನೀಡುವ ಜೀವೋದ್ಧಾರ I ನಿನ್ನ ಧರ್ಮಶಾಸ್ತ್ರ ಎನಗೆ ಸಂತೋಷಕರ II


ದೊರಕಲಿ ಪ್ರಭು ನನಗೆ ನಿನ್ನ ಕರುಣೆ I ನೀನು ವಾಗ್ದಾನಮಾಡಿದಾ ರಕ್ಷಣೆ II


ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II


ನಿನ್ನ ಆಜ್ಞೆಗಳಲ್ಲಿದೆ ನನಗಾನಂದ I ಅವುಗಳ ಮೇಲೆಯೆ ನನಗಭಿಮೋದ II


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು