Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:86 - ಕನ್ನಡ ಸತ್ಯವೇದವು C.L. Bible (BSI)

86 ನಿನ್ನ ಆಜ್ಞೆಗಳೆಲ್ಲ ನಂಬಲರ್ಹವಾದುವಯ್ಯಾ I ನಿಷ್ಕಾರಣವಾಗಿ ಹಿಂಸಿಸುತಿಹರು, ನೆರವಾಗಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

86 ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

86 ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ; ಅವರು ಮೋಸದಿಂದ ಹಿಂಸಿಸುತ್ತಾರೆ; ನನಗೆ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

86 ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. ಅವರಾದರೋ ನನ್ನನ್ನು ನಿಷ್ಕಾರಣವಾಗಿ ಹಿಂಸಿಸುತ್ತಾರೆ; ನನಗೆ ಸಹಾಯಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

86 ನಿಮ್ಮ ಆಜ್ಞೆಗಳೆಲ್ಲಾ ಭರವಸೆಗೆ ಯೋಗ್ಯವಾದವುಗಳೇ; ಕಾರಣವಿಲ್ಲದೆ ಜನರು ನನ್ನನ್ನು ಹಿಂಸಿಸುವುದರಿಂದ ನನಗೆ ಸಹಾಯಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:86
17 ತಿಳಿವುಗಳ ಹೋಲಿಕೆ  

ದೇವಾ, ನಾ ದಿಕ್ಕಿಲ್ಲದವನು, ಕುಗ್ಗಿದವನು, ನನ್ನ ಬಳಿಗೆ ಬಾ I ನೀನೆನಗೆ ಸಹಾಯಕನು, ರಕ್ಷಕನು ಪ್ರಭು, ತಡಮಾಡದೆ ಬಾ II


ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ನನಗೆ ಕೇಡು ಬಗೆದ ಗರ್ವಿಗಳಿಗಾಗಲಿ ಮಾನಭಂಗ I ನಾನಾದರೋ ಗೈವೆ ನಿನ್ನ ನೇಮಗಳ ಧ್ಯಾನಯೋಗ II


ಹೇ ಪ್ರಭೂ, ಹೇ ದೇವಾ, ನೆರವಾಗಯ್ಯಾ I ಅಚಲಪ್ರೀತಿಯಿಂದ ನನ್ನ ರಕ್ಷಿಸಯ್ಯಾ II


ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II


ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.


ಹೇ ಪ್ರಭೂ, ನೀನಿರುವೆ ಹತ್ತಿರ I ನಿನ್ನ ಆಜ್ಞೆಗಳೆಲ್ಲ ಸುಸ್ಥಿರ II


ಸತ್ಯವಾದುವು ನೀನಿತ್ತ ಕಟ್ಟಳೆಗಳು I ಪೂರ್ಣವಿಶ್ವಾಸನೀಯವಾದುವು ಅವುಗಳು II


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ನಿನ್ನ ನೀತಿ ನಿತ್ಯ I ನಿನ್ನ ಶಾಸ್ತ್ರ ಸತ್ಯ II


ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ I ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ II


ಶತ್ರುಗಳಿಂದ ಪ್ರಭು ಮುಕ್ತಗೊಳಿಸೆನ್ನನು I ನಿನ್ನನೇ ಮೊರೆಹೊಕ್ಕು ನಾ ಬಂದಿರುವೆನು II


ಬಲಿಷ್ಠ ವೈರಿಗಳು ವಿರೋಧಿಸುತಿಹರು ನಿಷ್ಕಾರಣವಾಗಿ I ಶತ್ರುಗಳನೇಕರು ದ್ವೇಷಿಸುತಿಹರು ಅನ್ಯಾಯವಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು