Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:9 - ಕನ್ನಡ ಸತ್ಯವೇದವು C.L. Bible (BSI)

9 ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವದು ಯಾವದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:9
29 ತಿಳಿವುಗಳ ಹೋಲಿಕೆ  

ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಮಗನೇ, ಪಾಪಿಗಳ ಪ್ರೇರಣೆಗೆ ಒಪ್ಪಿಗೆ ಕೊಡಲೇಬೇಡ.


ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II


ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ.


ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ.


ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.


ಜನಸಾಮಾನ್ಯರ ನಡುವೆ, ಯೌವನಸ್ಥರ ಮಧ್ಯೆ ಮತಿಗೆಟ್ಟ ಯುವಕನೊಬ್ಬ ನಡೆವುದನ್ನು ನಾನು ಕಂಡೆ.


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ.


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು’ ಎಂಬುದಾಗಿ ವಾಗ್ದಾನ ಮಾಡಿದ್ದೀರಿ; ಅದನ್ನು ನೆರವೇರಿಸಿರಿ.


ನನ್ನ ವಿಷಯವಾಗಿ ಕಹಿಯಾದ ತೀರ್ಪನು ಬರೆದಿರುವೆ ಯೌವನದ ಪಾಪಪರಿಣಾಮಗಳನು ನನ್ನ ಮೇಲೆ ಹೊರಿಸಿರುವೆ.


“ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿ ಇರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.


ಲೋಕವಿಚಾರಗಳಲಿ ಹಿಂಸಾತ್ಮಕ ಮಾರ್ಗ ಹಿಡಿದಿಲ್ಲ I ನಿನ್ನಧರ ವಚನವನು ನಾನೆಂದಿಗು ಮೀರಿ ನಡೆದಿಲ್ಲ II


ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು