Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:90 - ಕನ್ನಡ ಸತ್ಯವೇದವು C.L. Bible (BSI)

90 ಇರುವುದು ತಲತಲಾಂತರಕು ನಿನ್ನ ಸತ್ಯತೆ I ನೀ ಸ್ಥಾಪಿಸಿದ ಭೂಮಂಡಲಕ್ಕಿದೆ ಸ್ಥಿರತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

90 ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

90 ನಿನ್ನ ಸತ್ಯತೆಯು ತಲತಲಾಂತರಕ್ಕೂ ಇರುವದು. ನೀನು ಭೂವಿುಯನ್ನು ಸ್ಥಾಪಿಸಿರುತ್ತೀ; ಅದು ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

90 ನಿನ್ನ ನಂಬಿಗಸ್ತಿಕೆಯು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸೃಷ್ಟಿಸಿದೆ; ಅದು ಇಂದಿಗೂ ಸ್ಥಿರವಾಗಿ ನಿಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

90 ನಿಮ್ಮ ನಂಬಿಗಸ್ತಿಕೆಯು ಎಲ್ಲಾ ತಲೆಮಾರಿಗೂ ಮುಂದುವರಿಯುವುದು; ನೀವು ಸ್ಥಾಪಿಸಿದ ಭೂಮಿಯು ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:90
12 ತಿಳಿವುಗಳ ಹೋಲಿಕೆ  

ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ಸ್ಥಾಪಿಸಿದನು ಎಂದೆಂದಿಗೂ ಅವನ್ನು I ವಿಧಿಸಿಹನು ಮೀರಲಾಗದ ನಿಯಮವನು I


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II


ಆಕಾಶವು ನಿನ್ನದು ಪ್ರಭು, ಭೂಮಿಯೂ ನಿನ್ನದೇ I ಜಗವು, ಅದರಲ್ಲಿರುವುದೆಲ್ಲವು, ನಿನ್ನಿಂದಾದುದೇ II


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ಒಂದು ಸಂತತಿ ಗತಿಸುತ್ತದೆ, ಮತ್ತೊಂದು ಸಂತತಿ ಬರುತ್ತದೆ, ಭೂಮಿಯಾದರೋ ಶಾಶ್ವತವಾಗಿ ನಿಲ್ಲುತ್ತದೆ.


ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I ಅದೆಂದಿಗೂ ಕದಲದಂತೆ ಮಾಡಿರುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು