Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:91 - ಕನ್ನಡ ಸತ್ಯವೇದವು C.L. Bible (BSI)

91 ನಿನ್ನ ವಿಧಿಗನುಸಾರ ಅವು ಇಂದಿಗೂ ಉಳಿದಿವೆ I ಏಕೆನೆ, ಸರ್ವವೂ ಮಾಡುತಿವೆ ನಿನಗೆ ಸೇವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

91 ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

91 ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ ಸ್ಥಿರವಾಗಿ ನಿಂತಿರುತ್ತವೆ. ಯಾಕಂದರೆ ಸರ್ವವಸ್ತುಗಳೂ ನಿನ್ನನ್ನು ಸೇವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

91 ನಿನ್ನ ಆಜ್ಞೆಗಳಿಗನುಸಾರವಾಗಿ ಅದು ಸ್ಥಿರವಾಗಿಯೇ ಇದೆ. ಅವುಗಳೆಲ್ಲಾ ಸೇವಕರಂತೆ ನಿನ್ನ ಆಜ್ಞೆಗಳಿಗೆ ವಿಧೇಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

91 ನಿಮ್ಮ ನಿಯಮಗಳು ಇಂದಿನವರೆಗೂ ನಿಂತಿರುತ್ತವೆ, ಏಕೆಂದರೆ ಸೃಷ್ಟಿಗಳೆಲ್ಲವೂ ನಿಮ್ಮ ಸೇವೆಯನ್ನು ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:91
10 ತಿಳಿವುಗಳ ಹೋಲಿಕೆ  

ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, ‘ಬಾ’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, ‘ಹೋಗು’ ಎಂದರೆ ಹೋಗುತ್ತಾನೆ. ಸೇವಕನಿಗೆ, ‘ಇಂಥದ್ದನ್ನು ಮಾಡು’ ಎಂದರೆ ಮಾಡುತ್ತಾನೆ,” ಎಂದನು.


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ.


ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಕದನವಾಡಿದವು ತಾರೆಗಳು ಆಗಸದಿಂದಲೆ ಯುದ್ಧಮಾಡಿದವು ಸೀಸೆರನ ವಿರುದ್ಧ ತಮ್ಮಾ ಪಥದಿಂದಲೆ.


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು