Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:95 - ಕನ್ನಡ ಸತ್ಯವೇದವು C.L. Bible (BSI)

95 ಹೊಂಚುಹಾಕುತಿಹರು ದುರುಳರು ಸಂಹರಿಸಲೆನ್ನನು I ನಾನೋ ನಿನ್ನ ಕಟ್ಟಳೆಗಳನು ಲಕ್ಷಿಸುತ್ತಿರುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

95 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

95 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ; ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

95 ದುಷ್ಟರು ನನ್ನನ್ನು ನಾಶಮಾಡಲು ಪ್ರಯತ್ನಿಸಿದರು, ಆದರೆ ನಿನ್ನ ಒಡಂಬಡಿಕೆಯು ನನ್ನನ್ನು ಜ್ಞಾನಿಯನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

95 ದುಷ್ಟರು ನನ್ನನ್ನು ನಾಶಮಾಡುವುದಕ್ಕೆ ನನಗಾಗಿ ಕಾಯುತ್ತಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಆಲೋಚಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:95
19 ತಿಳಿವುಗಳ ಹೋಲಿಕೆ  

ನಿನ್ನ ಕಟ್ಟಳೆಗಳು ನನಗೆ ಅಧಿಕ ಪ್ರಿಯ I ನನ್ನ ಅಂತರಂಗ ಅವುಗಳಿಗೆ ವಿಧೇಯ I


ಅಂಟಿಕೊಂಡಿರುವೆನು ನಿನ್ನ ಕಟ್ಟಳೆಗಳಿಗೆ I ಆಶಾಭಂಗಪಡಿಸಬೇಡ ಪ್ರಭು ನನಗೆ II


ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II


ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.


ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು.


ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.


ಅಪೂರ್ವವಾದ ನಿನ್ನ ಕಟ್ಟಳೆಗಳನು I ಹೃತ್ಪೂರ್ವಕವಾಗಿ ನಾ ಪಾಲಿಪೆನು II


ನಿನ್ನ ದಾಸ ನಾನು, ದಯಪಾಲಿಸು ಎನಗೆ I ನಿನ್ನ ಕಟ್ಟಳೆಗಳನು ಅರಿವ ತಿಳುವಳಿಕೆ II


ದುರ್ಜನರ ಪಾಶಗಳು ಸುತ್ತಿಕೊಂಡಿವೆ ನನ್ನನು I ಆದರು ನಾ ಮರೆಯಲಿಲ್ಲ ನಿನ್ನ ಧರ್ಮಶಾಸ್ತ್ರವನು II


ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ದುಷ್ಟನಿಟ್ಟಿರುವನು ಕಣ್ಣನು ಸಜ್ಜನರ ಮೇಲೆ I ಹೊಂಚುಹಾಕಿ ನೋಡುತಿಹನು ಮಾಡಲವರ ಕೊಲೆ II


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು