Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:96 - ಕನ್ನಡ ಸತ್ಯವೇದವು C.L. Bible (BSI)

96 ನಾ ಬಲ್ಲೆ ಸರ್ವಸಂಪೂರ್ಣತೆಗೂ ಮಿತಿ ಉಂಟೆಂದು I ನಿನ್ನ ಆಜ್ಞೆಗಳಾದರೋ ಅಪರಿಮಿತವಾದುವೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

96 ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು. ಮೆಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

96 ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು; ಆದರೆ ನಿನ್ನ ಆಜ್ಞಾಶಾಸನವು ಅಪಾರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

96 ನಿನ್ನ ಧರ್ಮಶಾಸ್ತ್ರದ ಹೊರತು ಬೇರೆಲ್ಲವುಗಳಿಗೂ ಮೇರೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

96 ಸರ್ವ ಸಂಪೂರ್ಣತೆಗೂ ಒಂದು ಮಿತಿಯಿರುವುದನ್ನು ನಾನು ನೋಡಿದ್ದೇನೆ; ಆದರೆ ನಿಮ್ಮ ಆಜ್ಞೆಗಳು ಮಿತಿಯಿಲ್ಲದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:96
23 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಆಗ ನಾನೇ ಸ್ವತಃ ಮಾಡಿದ ಎಲ್ಲಾ ಕೆಲಸಕಾರ್ಯಗಳನ್ನೂ ಪಟ್ಟ ಎಲ್ಲ ಪ್ರಯಾಸವನ್ನೂ ಗಮನವಿಟ್ಟು ಪರಿಶೀಲಿಸಿದೆ. ಆದರೆ ಇಗೋ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಎಲ್ಲವೂ ವ್ಯರ್ಥ; ಲೋಕದಲ್ಲಿ ಲಾಭಕರವಾದುದು ಏನೂ ಕಾಣಲಿಲ್ಲ.


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


“ವ್ಯರ್ಥವೇ ವ್ಯರ್ಥ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಗೊಲ್ಯಾತನು ಅಲ್ಲೆ ನಿಂತು, ಇಸ್ರಯೇಲರ ಸೈನ್ಯದತ್ತ ಹೀಗೆಂದು ಗರ್ಜಿಸಿದನು: “ನೀವು ಸಜ್ಜಾಗಿ ಬಂದಿರುವುದು ಯುದ್ಧಮಾಡಲಿಕ್ಕೋ? ನಾನು ಫಿಲಿಷ್ಟಿಯನು. ನೀವು ಆ ಸೌಲನ ಗುಲಾಮರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿ.


ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲ ಅತಿಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು.


ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು.


ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಯೇಲರಲ್ಲೇ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು