Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:97 - ಕನ್ನಡ ಸತ್ಯವೇದವು C.L. Bible (BSI)

97 ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ I ನಾನದರಲೇ ದಿನವೆಲ್ಲಾ ಧ್ಯಾನಮಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

97 ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

97 ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ; ದಿನವೆಲ್ಲಾ ಅದೇ ನನ್ನ ಧ್ಯಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

97 ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

97 ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:97
14 ತಿಳಿವುಗಳ ಹೋಲಿಕೆ  

ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


ಜ್ಞಾನ ಉದಯಿಸುವುದು ನಿನ್ನ ಹೃದಯದೊಳಗೆ, ತಿಳುವಳಿಕೆ ಬೆಳಗುವುದು ನಿನ್ನ ಆತ್ಮದೊಳಗೆ.


ನಿನ್ನ ನೇಮನಿಯಮಗಳು ಪ್ರಭು, ಎನಿತೋ ಪ್ರಿಯ I ಕಾಪಾಡೆನ್ನನು ನಿನ್ನ ಪ್ರೀತಿಗನುಸಾರ II


ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.


ನಾ ಕೈಯೊಡ್ಡಿ ಕೇಳುವುದು ನಿನ್ನ ಆಜ್ಞೆಗಳನೆ I ನನಗೆ ಪ್ರಿಯ, ಧ್ಯಾನಾರ್ಹ, ನಿನ್ನ ನಿಬಂಧನೆ II


ನಿನ್ನ ಕಟ್ಟಳೆಗಳು ನನಗೆ ಅಧಿಕ ಪ್ರಿಯ I ನನ್ನ ಅಂತರಂಗ ಅವುಗಳಿಗೆ ವಿಧೇಯ I


ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ I ವಿಘ್ನಕರವಾದುದೇನೂ ಇರದು ಅಂಥವರಿಗೆ II


ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II


ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು; ಸರ್ವೇಶ್ವರನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು; ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರಬೇಕು; ಈ ಧರ್ಮಶಾಸ್ತ್ರದ ಎಲ್ಲ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸಲು ಅಭ್ಯಾಸಮಾಡಿಕೊಳ್ಳಬೇಕು; ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.


ದ್ವೇಷವಿದೆ ಎನಗೆ ದ್ವಿಮನಸ್ಕರಲಿ I ಪ್ರೀತಿ ಇದೆ ನಿನ್ನ ಧರ್ಮಶಾಸ್ತ್ರದಲಿ II


ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.


ನನಗಿದೆ ನಿನ್ನ ನಿಯಮಗಳ ಧ್ಯಾನ I ನಿನ್ನ ಮಾರ್ಗಗಳಲ್ಲಿ ಗಾಢ ಗಮನ II


ನಿನ್ನ ಆಜ್ಞೆಗಳಲ್ಲಿದೆ ನನಗಾನಂದ I ಅವುಗಳ ಮೇಲೆಯೆ ನನಗಭಿಮೋದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು