Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 12:1 - ಕನ್ನಡ ಸತ್ಯವೇದವು C.L. Bible (BSI)

1 ನೆರವಾಗು ಪ್ರಭು, ಭಕ್ತರಿಲ್ಲವಾದರು ಜಗದೊಳು I ಶರಣರಾರೂ ಕಾಣಸಿಗರೆನಗೆ ನರಮಾನವರೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಕೆಯುಳ್ಳವರು ಕಾಣಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನ್ನನ್ನು ರಕ್ಷಿಸು! ಒಳ್ಳೆಯವರೆಲ್ಲಾ ಕೊನೆಗೊಂಡರು. ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 12:1
18 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


ಭ್ರಷ್ಟಾಚಾರವು ಬೆಳೆದು ಬಹುಜನರ ಪ್ರೀತಿ ಉಡುಗಿಹೋಗುವುದು.


ಸುತ್ತಲು ನೋಡಿದೆ, ಯಾರು ಇರಲಿಲ್ಲ ಸಹಾಯಮಾಡಲು ನನಗೆ ಒತ್ತಾಸೆಗೆ ಒಬ್ಬನೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆ. ಆಗ ನನ್ನ ಭುಜಬಲವೇ ಜಯಕ್ಕೆ ಅಡಿಪಾಯವಾಯಿತು.


ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?


ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.


ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, “ಸ್ವಾಮೀ, ಕಾಪಾಡಿ. ನಾವು ನೀರುಪಾಲಾಗುತ್ತಿದ್ದೇವೆ,” ಎಂದರು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II


ನನ್ನ ಕಡೆ ತಿರುಗಿ ಪ್ರಭು, ನನ್ನನುದ್ಧರಿಸು I ನಿನ್ನಚಲ ಪ್ರೀತಿಯಿಂದ ನನ್ನ ರಕ್ಷಿಸು II


ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು. ಹಾಗೆಯೇ ಮುಳುಗಿಹೋಗಲಾರಂಭಿಸಿದನು. ಆಗ, “ಸ್ವಾಮೀ, ಕಾಪಾಡಿ, ಕಾಪಾಡಿ,” ಎಂದು ಕೂಗಿಕೊಂಡನು.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು