Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 12:2 - ಕನ್ನಡ ಸತ್ಯವೇದವು C.L. Bible (BSI)

2 ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 12:2
25 ತಿಳಿವುಗಳ ಹೋಲಿಕೆ  

ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಅವರ ನಾಲಿಗೆ ಕೊಲ್ಲುವ ಬಾಣ, ಅದು ಆಡುವುದು ಸುಳ್ಳನ್ನೇ ಬಾಯಲ್ಲಿ ಶುಭವೆಂದು ಹೇಳಿದರೂ ಹೃದಯದಲ್ಲಿ ಒಡ್ಡಿದ್ದಾರೆ ಹೊಂಚನ್ನೇ.


ನೋಡಬರುವರು, ನವಿರಾದ ಮಾತನಾಡುವರವರು I ಕೇಡನೆ ತುಂಬಿಸಿಕೊಂಡು ಹೊರಬಂದೊಡನೆ ಹರಡುವರು II


ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II


ತುಂಬಿದೆ ಶಾಪಕೋಪ, ಕುತಂತ್ರ ಅವನ ಬಾಯಲಿ I ಅವಿತಿದೆ ಪಾಪ, ಅತಿವಿನಾಶ ನಾಲಗೆಯಡಿಯಲಿ II


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


“ಇನ್ನು ಮೇಲೆ ಇಸ್ರಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು; ಮೋಸದ ಕಣಿ ಇರದು.


ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.


ಗುಟ್ಟನ್ನು ರಟ್ಟು ಮಾಡದಿರನು ಚಾಡಿಕೋರ; ತುಟಿ ಬಿಗಿಹಿಡಿಯದವನ ಗೊಡವೆ ನಿನಗೆ ಬೇಡ.


ಕ್ರೂರ ವೈರಿಗಳಿಂದೆನ್ನ ಬಿಡಿಸಯ್ಯಾ I ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II


ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II


ಜೆಬೂಲೂನ್ಯರಿಂದ: ನಿಷ್ಠೆಯುಳ್ಳ, ನಂಬಿಗಸ್ಥ, ಯುದ್ಧಮಾಡಲು ಸಿದ್ಧರಾದ, ಎಲ್ಲಾ ರೀತಿಯ ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿದ 50,000 ವೀರರು;


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?


ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು