Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 12:3 - ಕನ್ನಡ ಸತ್ಯವೇದವು C.L. Bible (BSI)

3 ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ವಂಚನೆಯ ತುಟಿಗಳನ್ನೂ ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೊಗಳಿಕೆಯ ಎಲ್ಲಾ ತುಟಿಗಳನ್ನೂ ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 12:3
26 ತಿಳಿವುಗಳ ಹೋಲಿಕೆ  

ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ಜಂಬದ ಹೇಳಿಕೆಗಳನ್ನೂ ದೇವದೂಷಣೆಯ ಮಾತುಗಳನ್ನೂ ಆಡುವುದಕ್ಕೆ ಆ ಮೃಗಕ್ಕೆ ಒಂದು ಬಾಯನ್ನು ಕೊಡಲಾಗಿತ್ತು. ನಲವತ್ತ ಎರಡು ತಿಂಗಳುಗಳವರೆಗೆ ತನ್ನ ಕಾರ್ಯ ಸಾಧಿಸಿಕೊಳ್ಳುವ ಅಧಿಕಾರವನ್ನೂ ಅದಕ್ಕೆ ನೀಡಲಾಗಿತ್ತು.


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.


ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


“ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ?


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಜೆರುಸಲೇಮ್ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ಹೆಚ್ಚಿನ ಮೌಲ್ಯದ ಕೆತ್ತನೆಯ ಮೂರ್ತಿಗಳನ್ನು ಆರಾಧಿಸುವ ರಾಜ್ಯಗಳನ್ನು ನಾನು ಗೆದ್ದಿದ್ದೇನೆ.


ಮುಖಸ್ತುತಿ ಮಾಡಲು ನನ್ನಿಂದಾಗುವುದಿಲ್ಲ. ಮಾಡಿದರೆ ಸೃಷ್ಟಿಕರ್ತ ನನ್ನನು ಬೇಗ ನಿರ್ಮೂಲಮಾಡಬಲ್ಲ.”


ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II


ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II


ಹಗೆಗಾರನ ತುಟಿಯಲ್ಲಿ ಸ್ನೇಹಭಾವದ ನಟನೆ; ಹೊಟ್ಟೆಯಲ್ಲಾದರೊ ಹುದುಗಿದೆ ವಂಚನೆ.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಅವರ ನಾಲಿಗೆ ಕೊಲ್ಲುವ ಬಾಣ, ಅದು ಆಡುವುದು ಸುಳ್ಳನ್ನೇ ಬಾಯಲ್ಲಿ ಶುಭವೆಂದು ಹೇಳಿದರೂ ಹೃದಯದಲ್ಲಿ ಒಡ್ಡಿದ್ದಾರೆ ಹೊಂಚನ್ನೇ.


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು