Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 12:7 - ಕನ್ನಡ ಸತ್ಯವೇದವು C.L. Bible (BSI)

7-8 ಅಲೆದಾಡುತಿಹರು ದುರುಳ ದ್ರೋಹಿಗಳು ಎಲ್ಲೆಡೆ I ದುಷ್ಟರಿಗಿದೆ ಮಾನವರ ನಡುವೆ ಪ್ರತಿಷ್ಟೆ II ನಮ್ಮನಿವರ ಕೈಯಿಂದ ತಪ್ಪಿಸಿ ಕಾಪಾಡು I ಹೇ ಪ್ರಭು, ನಮ್ಮನು ಸದಾ ಸುರಕ್ಷಿತವಾಗಿಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ದುಷ್ಟತ್ವಕ್ಕೆ ಆಳಿಕೆ ಬಂದು ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು. ಅವರನ್ನು ಶಾಶ್ವತವಾಗಿ ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 12:7
15 ತಿಳಿವುಗಳ ಹೋಲಿಕೆ  

ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಹೆದರಿ ನಡೆಯುವವರ ಇಷ್ಟವನು ಈಡೇರಿಸುವನು I ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು II


ಪ್ರಭು ಕಾಯುವನು ನಿನ್ನ ಆಗುಹೋಗುಗಳನು I ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು II


ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ನೀಡು ದೇವಾ ರಕ್ಷಣೆಯನು I ನಾ ನಿನಗೆ ಶರಣಾಗತನು II


ದಲಿತರಿಗೆ, ದಿಕ್ಕಿಲ್ಲದವರಿಗೆ ನ್ಯಾಯವನು ದೊರಕಿಸುವೆ I ಈ ಪರಿ ಇಳೆಮಾನವರ ತುಳಿತದಿಂದ ಪಾರುಮಾಡುವೆ II


ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಪ್ರಭುವಲ್ಲದೆ ಇನ್ನಾವ ದೇವರುಂಟು? I ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು? II


ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ I ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ II


ನಿನ್ನ ನುಡಿಯೊಂದೊಂದೂ ಪರಮ ಪರಿಶೋಧಿತ I ಅದರ ಮೇಲಿದೆ ನಿನ್ನ ದಾಸನಿಗೆ ಬಹುಮೋದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು